Advertisement

Chikodi: ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

05:23 PM Sep 30, 2024 | Team Udayavani |

ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು.

Advertisement

ತಾಲೂಕಿನ ನಣದಿ ಗ್ರಾಮದ ಕೆಎಚ್‌ ಪಿಎಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್‌, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ “ಅಜೀಂ ಪ್ರೇಮ್‌ ಜಿ ಫೌಂಡೇಷನ್‌” ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಶಾಲಾ ಮಕ್ಕಳಿಗೆ ಪೌಷ್ಠಿಕತೆ ವೃದ್ಧಿಸಲು ಎಲ್ಲಾ ಅನುದಾನಿತ ಪ್ರಾಥಮಿಕ ಹಾಗೂ ಫ್ರೌಢಶಾಲಾ ವಿಧ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ರಾಜ್ಯದಲ್ಲಿನ ಶಾಲಾ ಮಕ್ಕಳಿಗೆ ಇನ್ಮುಂದೆ ವಾರದ 6 ದಿನವೂ ಮೊಟ್ಟೆ ನೀಡಲಾಗುತ್ತದೆ. ಇದಕ್ಕೆ ಅಜೀಂ ಪ್ರೆಮ್‍ಜೀ ಫೌಂಡೇಷನ್ ನೆರವು ನೀಡಿದೆ ಎಂದರು.

ಶಾಸಕ ಗಣೇಶ ಹುಕ್ಕೇರಿ ಮಾತನಾಡಿ, ಶಾಲಾ ಮಕ್ಕಳಿಗೆ ಸಮಾನ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಉತ್ತಮ ಆರೋಗ್ಯವನ್ನು ನೀಡಲು ಸರಕಾರ ಕಾಳಜಿ ವಹಿಸಿದೆ. ಸರಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರ ನೀಡಲು ಮುಂದೆ ಬಂದಿರುವ ಅಜೀಂ ಪ್ರೆಮ್‍ಜೀ ಅವರದ್ದು ದೊಡ್ಡ ಮನಸ್ಸು. ಕುಟುಂಬ ಕಾರ್ಯಕ್ಕೆ ಸರಕಾರದ ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಈ ಸಂದರ್ಭದಲ್ಲಿ ಬುಡಾ ಅಧ್ಯಕ್ಷ ಲಕ್ಷ್ಮಣರಾವ್‌ ಚಿಂಗಳೆ, ಪ್ರಭಾರಿ ಡಿಡಿಪಿಐ ಬಿ ಎ. ಮಕನಮರಡಿ, ಬಿಸಿಯೂಟ ತಾಲೂಕು ಸಹಾಯಕ ನಿರ್ದೇಶಕ ಮಹಾದೇವ ಜನಗೌಡ. ಜಿ.ಎಂ.ಕಾಂಬಳೆ. ಎನ್.ಜಿ.ಪಾಟೀಲ.‌ಎಸ್.ಎಸ್.ಧುಪದಾಳ ಹಾಗೂ ನಣದಿ ಗ್ರಾಪಂ ಅಧ್ಯಕ್ಷ, ಸದಸ್ಯರು, ಫ್ರೌ. ಶಾ . ಶಿಕಕ್ಷರ ಸಂಘದ ಅಧ್ಯಕ್ಷ, ಸದಸ್ಯರು ಹಾಗೂ ಗ್ರಾಮಸ್ಥರು ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next