Advertisement

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

09:26 PM Sep 20, 2024 | Team Udayavani |

ಬೆಳಗಾವಿ: ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಪ್ಯಾಲಿಸ್ತೀನ್ ಧ್ವಜ ಹಾರಾಡಿದ್ದು, ಕೂಡಲೇ ಪೊಲೀಸರು ಈ ಧ್ವಜ ವಶಕ್ಕೆ ಪಡೆದುಕೊಂಡ ಘಟನೆ ಶುಕ್ರವಾರ(ಸೆ20) ನಡೆದಿದೆ.

Advertisement

ಮೆರವಣಿಗೆಯಲ್ಲಿ ಕೆಲ ಯುವಕರು ಮೆರವಣಿಗೆ ವೇಳೆ ಕೈಯಲ್ಲಿ ಪ್ಯಾಲೇಸ್ತೀನ್ ಧ್ವಜ ಹಿಡಿದು ಕುಣಿದು ಕುಪ್ಪಳಿಸಿದ್ದಾರೆ. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದಿದ್ದ ಈದ್ ಮಿಲಾದ್ ಮೆರವಣಿಗೆಯಲ್ಲಿ ಪ್ಯಾಲೇಸ್ತೀನ್ ಧ್ಚಜ ಹಾರಾಡಿಸಿದ್ದಾರೆ. ಇದನ್ನು ಕಂಡ ಪ್ಯಾಲೇಸ್ತೀನ್ ಧ್ವಜ ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಈದ್ ಮಿಲಾದ್ ಹಬ್ಬದ ದಿನ ಗಣೇಶೋತ್ಸವ ವಿಸರ್ಜನೆ ಹಿನ್ನೆಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಈದ್ ಮಿಲಾದ್ ಮೆರವಣಿಗೆ ಮುಂದೂಡಲಾಗಿತ್ತು. ಅದರಂತೆ ಶುಕ್ರವಾರ ಅವಕಾಶ ನೀಡಲಾಗಿತ್ತು. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next