Advertisement

ಚಿಕ್ಕೋಡಿ: ವಿದ್ಯುತ್ ಅವಘಡದಿಂದ ವಿದ್ಯಾರ್ಥಿನಿ ಸಾವು: ಪರಿಹಾರಕ್ಕಾಗಿ ಬೃಹತ್ ಪ್ರತಿಭಟನೆ

02:15 PM Jul 07, 2022 | Team Udayavani |

ಚಿಕ್ಕೋಡಿ: ವಿದ್ಯುತ್ ಸ್ಪರ್ಶದಿಂದ ಮೃತಪಟ್ಟ ವಿದ್ಯಾರ್ಥಿ ಕುಟುಂಬಕ್ಕೆ ಸೂಕ್ತ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಚಿಕ್ಕೋಡಿ ನಗರದಲ್ಲಿ ರಾಜ್ಯ ರೈತ ಸಂಘ ಬೃಹತ್ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ವಿರುದ್ದ ಆಕ್ರೋಶ ಹೊರ ಹಾಕಿದೆ.

Advertisement

ಕಳೆದ ಎರಡು ದಿನಗಳ ಹಿಂದೆ ನಿಪ್ಪಾಣಿ ತಾಲೂಕಿನ ಡೋಣೆವಾಡಿ ಮರಾಠಿ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ವಿದ್ಯುತ್ ಅವಘಡದಿಂದ ಮೂರನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನುಷ್ಕಾ ಬೆಂಡೆ ಮೃತಪಟ್ಟಿದ್ದು. ಬಾಲಕಿ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಕೊಡಬೇಕೆಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ಚುನಪ್ಪ ಪೂಜೇರಿ ಮಾತನಾಡಿ, ಶಿಕ್ಷಣ ಮತ್ತು ಹೆಸ್ಕಾಂ ಮತ್ತು ಜಿಲ್ಲಾ ಪಂಚಾಯತಿ ಮೂರು ಇಲಾಖೆ ನಿರ್ಲಕ್ಷ್ಯದಿಂದ ವಿದ್ಯಾರ್ಥಿ ಸಾವಿಗೆ ಕಾರಣವಾಗಿದೆ.ಮುಖ್ಯ ಶಿಕ್ಷಕನಿಗೆ ಜೈಲು ಶಿಕ್ಷೆ ಆಗಬೇಕು. ಇಲಾಖೆ ಅಧಿಕಾರಿಗಳಿಗೆ ತಕ್ಕ ಶಿಕ್ಷೆ ಆಗಬೇಕು. ಮೂರು ಇಲಾಖೆ ಕೂಡಿಕೊಂಡು ಬಾಲಕಿ ಕುಟುಂಬಕ್ಕೆ 50 ಲಕ್ಷ ರೂ ಪರಿಹಾರ ಕೊಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರಕಾರಿ ಶಾಲೆಯ ಶೌಚಾಲಯ ಸರಿಯಾಗಿ ಇಲ್ಲ. ಶೌಚಾಲಯದಲ್ಲಿ ಹಾವು ಚೇಳುಗಳಿಂದ ಕೂಡಿವೆ. ಪಾಲಕರು ಭಯ ಭೀತರಾಗಿದ್ದಾರೆ. ಸರಕಾರ ಸರಕಾರಿ ಶಾಲೆಗಳಲ್ಲಿ ಇರುವ ಮೂಲಭೂತ ಸೌಲಭ್ಯ ಒದಗಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ಸದಸ್ಯರಾದ ರಾಜು ಪವಾರ. ಕುಮಾರ ತಿಗಡಿ. ಶಿವಾನಂದ ಇಳಿಗೇರ. ರಾಘವೇಂದ್ರ ನಾಯಿಕ. ಪ್ರಕಾಶ ನಾಯಿಕ. ಭೀಮಶಿ ಬಗಟಿ, ಮಲ್ಲಪ್ಪ ಅಂಗಡಿ, ರಮೇಶ ಪಾಟೀಲ ಮುಂತಾದವರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next