Advertisement

ಜಿಲ್ಲಾ ಸರ್ಜನ್‌ ನಾಯ್ಕ ವರ್ಗಾವಣೆ ರದ್ದುಗೊಳಿಸಿ

03:14 PM May 01, 2020 | Naveen |

ಚಿಕ್ಕಮಗಳೂರು: ಜಿಲ್ಲಾ ಸರ್ಜನ್‌ ಡಾ|ಎಸ್‌.ಕುಮಾರ್‌ನಾಯ್ಕರವರ ವರ್ಗಾವಣೆ ರದ್ದುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್‌ ವಾದ) ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.

Advertisement

ಗುರುವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದದರು. ಡಾ|ಎಸ್‌.ಕುಮಾರ್‌ ನಾಯ್ಕ ಅವರು ಜಿಲ್ಲಾ ಸರ್ಜನ್‌ ಆದ ನಂತರ ನಗರದ ಸರ್ಕಾರಿ ಆಸ್ಪತ್ರೆಯನ್ನು ಸುಸಜ್ಜಿತಗೊಳಿಸಿದ್ದಾರೆ. ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಅವರು ಸಾರ್ವಜನಿಕರ ಸಮಸ್ಯೆಗಳಿಗೆ ಉತ್ತಮವಾಗಿ ಸ್ಪಂದಿ ಸುತ್ತಿದ್ದರು ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕೋವಿಡ್ ವೈರಸ್‌ ತಡೆಗೆ ಹಗಲು ರಾತ್ರಿಯೆನ್ನದೆ ದುಡಿಯುತ್ತಿರುವ ಅವರನ್ನು ಇಂತಹ ಸನ್ನಿವೇಶದಲ್ಲಿ ಯಾವ ಕಾರಣಕ್ಕೂ ವರ್ಗಾವಣೆ ಮಾಡಬಾರದು ಎಂದು ಆಗ್ರಹಿಸಿದ್ದಾರೆ.
ವರ್ಗಾವಣೆ ರದ್ದುಗೊಳಿಸದಿದ್ದಲ್ಲಿ ಲಾಕ್‌ಡೌನ್‌ ತೆರವಿನ ನಂತರ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ ವಾದ) ಜಿಲ್ಲಾ ಪ್ರಧಾನ ಸಂಚಾಲಕ ಮರ್ಲೆ ಅಣ್ಣಯ್ಯ, ಖಜಾಂಚಿ ಆರ್‌.ಶೇಖರ್‌, ಮುಖಂಡರಾದ ಪರಮೇಶ್‌, ಕೃಷ್ಣಮೂರ್ತಿ ಇದ್ದರು.

ದಿಢೀರ್‌ ವರ್ಗಾವಣೆ ಮಲ್ಲೇಗೌಡ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಸರ್ಜನ್‌ ಡಾ| ಕುಮಾರ್‌ ನಾಯ್ಕ ಅವರನ್ನು ಸರ್ಕಾರ ದಿಢೀರ್‌ ವರ್ಗಾವಣೆ ಮಾಡಿ ಗುರುವಾರ ಆದೇಶ
ಹೊರಡಿಸಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಡಾ|ಮೋಹನ್‌ ಅವರನ್ನು ಈ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಕೋವಿಡ್ ತುರ್ತು ಸಂದರ್ಭದಲ್ಲಿ ಜಿಲ್ಲಾ
ಸರ್ಜನ್‌ ದಿಢೀರ್‌ ವರ್ಗಾವಣೆ ಸಾರ್ವಜನಿಕವಾಗಿ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next