Advertisement

ಚಿಕ್ಕಮಗಳೂರು : ಅಕ್ರಮ ಸಂಬಂಧವನ್ನು ಪ್ರಶ್ನಿಸಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ

06:14 PM Jun 30, 2021 | Team Udayavani |

ಚಿಕ್ಕಮಗಳೂರು : ಅಕ್ರಮ ಸಂಬಂಧ ಪ್ರಶ್ನಿಸಿದಕ್ಕೆ ಪತಿಯೇ ಪತ್ನಿಯನ್ನು ಕೊಲೆ ಮಾಡಿರುವ ಆರೋಪ ಚಿಕ್ಕಮಗಳೂರು ನಗರದ ಪೆನ್ಷನ್ ಮೊಹಲ್ಲಾ ಬಡಾವಣೆಯಲ್ಲಿ ಕೇಳಿ ಬಂದಿದೆ.

Advertisement

ಕೊಲೆಯಾಗಿರುವವರನ್ನು ಸಿಮ್ರಾನ್ (22) ಎಂದು ಗುರುತಿಸಲಾಗಿದೆ. ನೀರಿನ ಸಂಪ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ ಎಂದು ಆರೋಪ ಮಾಡಲಾಗಿದೆ.  ಸಿಮ್ರಾನ್ ಪತಿ ಫೈರೂಜ್ ವಿರುದ್ಧ ಕೊಲೆ ಮಾಡಿರುವ ಆರೋಪ ಕೇಳಿ ಬಂದಿದೆ.

ಕಳೆದ ಮೂರು ತಿಂಗಳ ಹಿಂದೆಯಷ್ಟೇ ಸಿಮ್ರಾನ್  ಜೊತೆ ಫೈರೋಜ್ ವಿವಾಹವಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಮ್ರಾನ್ ಪತಿ ಫೈರೋಜ್, ಅತ್ತೆ, ಮಾವರನ್ನು ಪೊಲೀಸರ ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next