Advertisement
ಕಳೆದ ಕೆಲ ದಿನಗಳಿಂದ ಜಿಲ್ಲಾ ಪತ್ರಕರ್ತರ ಸಂಘದ ಪದಾಧಿಕಾರಿಗಳು ಜಿಲ್ಲೆಗೆ ಆಗಮಿಸುವ ಪ್ರವಾಸಿಗರಲ್ಲಿ “ಮತದಾನ ಮಾಡಿ’ ಎಂದು ಜಾಗೃತಿ ಮೂಡಿಸುವ ಕಾರ್ಯ ಮಾಡುತ್ತಿದ್ದರು.ಮತದಾನದ ದಿನ ರಜಾ ಇರುವುದರಿಂದ ಪ್ರವಾಸಕ್ಕೆ ಆಗಮಿಸದೆ ಮತ ಚಲಾಯಿಸಿದ ನಂತರ ಪ್ರವಾಸಕ್ಕೆ ಬರುವಂತೆ ಮನವಿ
ಮಾಡಿದ್ದರು. ಹೀಗಾಗಿ ಗುರುವಾರ ಮಾಗಡಿ ಹ್ಯಾಂಡ್ ಪೋಸ್ಟ್ ಮತ್ತು ಗಿರಿ ರಸ್ತೆ ಸೇರಿ ವಿವಿಧ ರಸ್ತೆಗಳಲ್ಲಿ ನಿಂತು ಪ್ರವಾಸಿಗರ ವಾಹನಗಳನ್ನು ತಡೆದು ಮತದಾನ ಮಾಡಿ ಬಂದಿರುವ ಬಗ್ಗೆ
ಪರಿಶೀಲಿಸಿದರು. ಈ ವೇಳೆ 200ಕ್ಕೂ ಅಧಿಕ ಪ್ರವಾಸಿಗರು ಮತ ಚಲಾಯಿಸದೇ ಬಂದಿರುವುದು ಬೆಳಕಿಗೆ ಬಂತು. ಅವರಲ್ಲಿ
ಬೆಂಗಳೂರಿನ ಐಟಿಬಿಟಿ ಉದ್ಯೋಗಿಗಳ ಸಂಖ್ಯೆಯೇ ಹೆಚ್ಚಿತ್ತು. ಹಲವರಿಗೆ ಇದೀಗ ನಡೆಯುತ್ತಿರುವುದು ಯಾವ ಚುನಾವಣೆ
ಎಂಬುದೇ ತಿಳಿದಿರಲಿಲ್ಲ. ಇನ್ನೂ ಕೆಲವರಿಗೆ ಮತದಾನದ ದಿನಾಂಕವೂ ಗೊತ್ತಿಲ್ಲದಿರುವುದು ದಂಗುಬಡಿಸಿತು.
ಬ್ಯಾಲದಾಳ್ ಕುಮಾರ್, ಕಾರ್ಯದರ್ಶಿ ವಿ.ಜೆ. ರಾಜೇಶ್, ಪುರುಷೋತ್ತಮ್ ಹಾಜರಿದ್ದರು.