Advertisement
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
Related Articles
Advertisement
ಜಿಲ್ಲಾ ರಕ್ಷಣಾಧಿಕಾರಿ ಹರೀಶ್ ಪಾಂಡೆ ಮಾತನಾಡಿ, ವಾಹನಗಳ ಪಾರ್ಕಿಂಗ್ ದಟ್ಟಣೆಯಿಂದಾಗಿ ಹಳೇ ಜೈಲಿನ ಜಾಗದಲ್ಲಿ ಬಸ್‌ಗಳನ್ನು ಮತ್ತು ಇತರೆ ವಾಹನಗಳನ್ನು ನಿಲ್ಲಿಸುತ್ತಿದ್ದು, ಯಾವುದೇ ರೀತಿಯ ಶುಲ್ಕ ಪಾವತಿ ಮಾಡುತ್ತಿಲ್ಲ. ಅದಕ್ಕೆ ಪರಿಹಾರವಾಗಿ ಕೆಎಸ್‌ಆರ್‌ಟಿಸಿ ಇಲಾಖೆಯವರು ನಿಗದಿತ ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಿ ವಾಹನ ಮಾಲಿಕರಿಂದ ಶುಲ್ಕ ಪಡೆದುಕೊಳ್ಳುವಂತೆ ತಿಳಿಸಿದರು.
ನಗರದ ಐ.ಜಿ.ರಸ್ತೆ ಅತ್ಯಂತ ಸೂಕ್ಷ್ಮ ಬ್ಲ್ಯಾಕ್ ಸ್ಪಾಟ್ ರಸ್ತೆಯಾಗಿದ್ದು, ಕಳೆದ 5 ವರ್ಷಗಳಿಂದ 29 ಅಪಘಾತಗಳಾಗಿ 4 ಜನ ಮೃತಪಟ್ಟಿದ್ದಾರೆ. ಕಾರಣ ರಸ್ತೆಯಲ್ಲಿ ವಾಹನಗಳು ಅಡ್ಡಾದಿಡ್ಡಿಯಾಗಿ ಸಂಚರಿಸುತ್ತಿದ್ದು, ಇದನ್ನು ತಡೆಯಲು ವೈಜ್ಞಾನಿಕವಾಗಿ ರಸ್ತೆ ವಿಭಜಕವನ್ನು ಅಳವಡಿಸಬೇಕು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಶೀಘ್ರದಲ್ಲಿಯೇ ರಸ್ತೆ ವಿಭಜಕಗಳನ್ನು ಅಳವಡಿಸಲು ಮುಂದಾಗಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಎಂ.ಬಿ.ಶಿರೋಳ್ಕರ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎನ್.ಚಂದ್ರಶೇಖರ್ ಮತ್ತು ವಿವಿಧ ಇಲಾಖೆಗಳ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.
ಸಾರ್ವಜನಿಕರ ಸುಗಮ ಸಂಚಾರಕ್ಕೆ ಅಗತ್ಯವಿರುವ ಸಂಚಾರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ಸಾರ್ವಜನಿಕರು ಸುರಕ್ಷಿತವಾಗಿ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿಗಳ ಕಚೇರಿ ನ್ಯಾಯಾಲಯ ಸಭಾಂಗಣದಲ್ಲಿ ನಡೆದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಸಾರಿಗೆ ವ್ಯವಸ್ಥೆಯಲ್ಲಿ ಸುಧಾರಣೆಗಳನ್ನು ಕೈಗೊಳ್ಳಬೇಕು. ನಗರದ ಇಂದಿರಾ ಗಾಂಧಿ ರಸ್ತೆಯ ಶೃಂಗಾರ್ ಸರ್ಕಲ್ನಿಂದ ಬೋಳ ರಾಮೇಶ್ವರ ದೇವಸ್ಥಾನದ ರಸ್ತೆಯಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಆ ರಸ್ತೆಯಲ್ಲಿ ಸ್ಟೀಲ್ ಬ್ಯಾರಿಕೇಡ್ ಅಳವಡಿಸಿದಾಗ ಮಾತ್ರ ಅಪಘಾತರಹಿತ ಸಂಚಾರಕ್ಕೆ ದಾರಿಯಾಗುತ್ತದೆ ಎಂದು ಹೇಳಿದರು.
ದ್ವಿಚಕ್ರ ವಾಹನಗಳಲ್ಲಿ ಕರ್ಕಶ ಶಬ್ದ ಉಂಟು ಮಾಡುವ ಸೈಲೆನ್ಸರ್‌ಗಳಿಂದ ಉಂಟಾಗುವ ಶಬ್ದ ಮಾಲಿನ್ಯಕ್ಕೆ ಕಾರಣವಾಗುವ ಗ್ಯಾರೇಜುಗಳ ಮೇಲೆ ಕ್ರಮ ಕೈಗೊಂಡಿರುವ ಬಗ್ಗೆ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ರಸ್ತೆಯಲ್ಲಿ ಅಪಘಾತವಾದಾಗ ಪ್ರಥಮ ಚಿಕಿತ್ಸೆ ನೀಡಲು ಬೈಕ್ ಆ್ಯಂಬುಲೆನ್ಸ್ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮೂಡಿಗೆರೆ ಹಾಗೂ ತರೀಕೆರೆ-ಕೆಮ್ಮಣ್ಣುಗುಂಡಿ ಮಾರ್ಗದಲ್ಲಿ ಸರಕು ಸಾಗಾಣಿಕೆ ವಾಹನಗಳಲ್ಲಿ ಅನಧಿಕೃತವಾಗಿ ಕೂಲಿ ಕಾರ್ಮಿಕರನ್ನು ಕರೆದುಕೊಂಡು ಹೋಗುತ್ತಿದ್ದು, ಇದರ ಬಗ್ಗೆ ಶಿಸ್ತಿನ ಕ್ರಮ ಕೈಗೊಂಡು ದಂಡ ವಿಧಿಸಬೇಕೆಂದು ತಿಳಿಸಿದರು.