Advertisement

Chikmagalur: ಸಾಲಬಾಧೆಯಿಂದ ಮನನೊಂದು ರೈತ ಆತ್ಮಹತ್ಯೆ

02:14 PM Oct 18, 2023 | Team Udayavani |

ಚಿಕ್ಕಮಗಳೂರು : ಜಿಲ್ಲೆಯ ಕಾಡೂರು ತಾಲೂಕಿನ ಹಿರೇನಲ್ಲೂರು ಹೋಬಳಿಯ ಕೇದಿಗೆರೆ ಗ್ರಾಮದ ರೈತ ಸಾಲಬಾಧೆ ತಾಳಲಾರದೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ಗ್ರಾಮದ ಮಂಜುನಾಥ( 38) ಮೃತ ದುದೈವಿ.

ಮಂಜುನಾಥ ತನ್ನ ತಂದೆಗೆ ಸೇರಿದ 2 ಎಕರೆ  ಜಮೀನಿನಲ್ಲಿ ವ್ಯವಸಾಯ ಮಾಡಿಕೊಂಡಿದ್ದ, ಇತ್ತೀಚೆಗೆ ಸೂರ್ಯಕಾಂತಿ, ನೆಲಗಡಲೆ, ಈರುಳ್ಳಿ ಬೆಳೆಯಲು ವಿವಿಧ ಬ್ಯಾಂಕ್ ಹಾಗೂ ಫೈನಾನ್ಸ್  ಮತ್ತಿತರ ಕಡೆಗಳಲ್ಲಿ  ಸುಮಾರು 5 ಲಕ್ಷ ರೂ. ಸಾಲ ಮಾಡಿಕೊಂಡಿದ್ದ. ಬೆಳೆ ಸರಿಯಾಗಿ ಬರದ ಕಾರಣ ಮನನೊಂದು ಅವರ ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಮೃತನ ಪತ್ನಿ ರೇಣುಕಮ್ಮ ನೀಡಿದ ದೂರಿನ ಆಧಾರದಲ್ಲಿ ಯಗಟಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೀರೂರು ಸಾರ್ವಜನಿಕ ಆಸ್ಪತ್ರೆಯಲ್ಲಿ  ವೈದ್ಯರು ಶವಪರೀಕ್ಷೆ ನಡೆಸಿ ವರದಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next