Advertisement

Chikmagalur; ‘ನಾನು ಕರಸೇವಕ, ನನ್ನನ್ನೂ ಬಂಧಿಸಿ..’: ಪೊಲೀಸ್ ಠಾಣೆ ಎದುರು ಸಿ.ಟಿ ರವಿ ಧರಣಿ

12:03 PM Jan 04, 2024 | Team Udayavani |

ಚಿಕ್ಕಮಗಳೂರು: ನಾನು ಕರಸೇವಕ ನನ್ನನ್ನು ಬಂಧಿಸುವಂತೆ ಆಗ್ರಹಿಸಿ ಮಾಜಿ ಸಚಿವ ಸಿ.ಟಿ.ರವಿ ಗುರುವಾರ ಚಿಕ್ಕಮಗಳೂರು ನಗರ ಠಾಣೆಗೆ ನೂರಾರು ಕಾರ್ಯಕರ್ತರೊಂದಿಗೆ ಆಗಮಿಸಿ ಆಗ್ರಹಿಸಿದರು.

Advertisement

ಕಾರ್ಯಕರ್ತರೊಂದಿಗೆ ಆಗಮಿಸಿದ ಅವರು ಪೊಲೀಸ್ ಠಾಣೆ ಮುಂಭಾಗ ನಾನು ಕ್ರಿ.ಶ.1992 ಡಿ.6ರ ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ ನನ್ನನ್ನೂ ಬಂಧಿಸಿ ಎಂಬ ಬಿತ್ತಿಪತ್ರವನ್ನು ಕೈಯಲ್ಲಿ ಹಿಡಿದು ನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಕಾರ್ಯಕರ್ತರು ಇದ್ದು ಸಿ.ಟಿ.ರವಿ ಅವರ ಪ್ರತಿಭಟನೆಗೆ ಸಾಥ್ ನೀಡಿದರು. ಈ ವೇಳೆ ರಾಮನ ಭಜನೆ ಜಪಿಸಿದರು. ಜೈ ಶ್ರೀರಾಮ್ ಘೋಷಣೆಗಳನ್ನು ಮೊಳಗಿಸಿದರು.

ಹುಬ್ಬಳಿಯಲ್ಲಿ ಕರಸೇವಕ ಶ್ರೀಕಾಂತ್ ಪೂಜಾರಿ ಅವರನ್ನು ಬಂಧಿಸಿದ್ದು, ನಾನು ಕರಸೇವೆಯಲ್ಲಿ ಪಾಲ್ಗೊಂಡಿದ್ದೆ ನನ್ನನ್ನೂ ಬಂಧಿಸುವಂತೆ ಆಗ್ರಹಿಸಿದರು.

ಈ ವೇಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಂತರ ಗೃಹ ಕಚೇರಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, ಇತಿಹಾಸ ಅರಿಯದವನು ಇತಿಹಾಸ ಸೃಷ್ಟಿಸಲಾರ ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಟಾಂಗ್ ನೀಡಿದರು.

Advertisement

ಒಂದು ಕಾಲದಲ್ಲಿ ಪಾಕಿಸ್ತಾನ, ಅಫ್ಘಾನಿಸ್ತಾನ, ಬಾಂಗ್ಲಾದೇಶ ಅಖಂಡ ಭಾರತದ ಭಾಗವಾಗಿತ್ತು. ಅಲ್ಲಿ ನೂರಾರು ಹಿಂದೂಗಳು ಇದ್ದರು. ಗಾಂಧಾರಿಯ ತವರು ಮನೆ ಅಫ್ಘಾನಿಸ್ತಾನ ಭಾರತದಲ್ಲಿ ಹಿಂದೂಗಳು ಕಡಿಮೆ ಆದಾಗ ಮೊಘಲ್ ಸ್ಥಾನ ಅಥವಾ ಪಾಕಿಸ್ತಾನ ಆಗುತ್ತದೆ. ಹಿಂದೂಗಳನ್ನು ದುರ್ಬಲಗೊಳಿಸುವುದು ಕಾಂಗ್ರೆಸ್ ನೀತಿ, ಪಾಕಿಸ್ತಾನದ ನಿರ್ಮಾಣಕ್ಕೆ ಕಾರಣವಾಗಿತ್ತದೆ. ಹಿಂದೂಗಳನ್ನು ಒಡೆದಾಳುವ ನೀತಿ ಅಫ್ಘಾನಿಸ್ತಾನ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದರು.

ಹಿಂದೂಗಳು ಒಗ್ಗಟ್ಟಾಗಿದ್ದರೆ ಪಾಕಿಸ್ತಾನ ಎನ್ನುವ ವಿಚಾರವೇ ತಲೆ ಎತ್ತುತ್ತಿರಲಿಲ್ಲ. ಕಾಂಗ್ರೆಸ್ ನದ್ದು ಎಸ್ ಡಿಪಿಐ, ಪಿಎಫ್ಐ ಬೆಂಬಲಿಸುವ ನೀತಿ, ನೀವು ಮತ್ತು ನಿಮ್ಮ ಮಕ್ಕಳು ಸುರಕ್ಷಿತವಾಗಿರವೇಕಾದರೇ ಕಾಂಗ್ರೆಸ್ ಕೆಟ್ಟ ನೀತಿ ಮಾಡಬಾರದು, ಹಿಂದೂ ಬಹುಸಂಖ್ಯಾತನಾಗಿದ್ದರೇ ಭಾರತ ಸಂವಿಧಾನ ಉಳಿಯುತ್ತದೆ. ಹಿಂದೂ ಅಲ್ಪ ಸಂಖ್ಯಾತನಾದರೇ ಭಾರತ, ಸಂವಿಧಾನ ಉಳಿಯುವುದಿಲ್ಲ ಎಂದರು.

ಹಿಂದೂ ರಾಷ್ಟ್ರವಾದರೇ ಅಫ್ಘಾನಿಸ್ತಾನ ಆಗಲು ಜಾಗವೇ ಇರಲಿಲ್ಲ. ನಿಮ್ಮ ಮನಸ್ಸಿನಿಂದ ತಾಲಿಬಾನ್ ಚಿಂತನೆ ತೆಗೆದು ಹಾಕಿ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next