Advertisement

ಚಿಕ್ಕಮಗಳೂರು:KSRTC ಸ್ಲೀಪರ್‌ ಬಸ್‌ ಪಲ್ಟಿ; 20 ಪ್ರಯಾಣಿಕರಿಗೆ ಗಾಯ 

12:47 PM Jun 15, 2018 | |

ಎನ್‌.ಆರ್‌.ಪುರ: ಬೆಂಗಳೂರಿನಿಂದ ತೆರಳಿದ್ದು ಕೆಎಸ್‌ಆರ್‌ಟಿಸಿ ಸ್ಲೀಪರ್‌ ಬಸ್‌ ಹಳ್ಳಕ್ಕೆ ಬಿದ್ದು 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಅವಘಡ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. 

Advertisement

ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, ಅದೃಷ್ಟವಷಾತ್‌ ಎಲ್ಲಾ ಗಾಯಾಳುಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. 

ಬಸ್‌ನಲ್ಲಿ 30 ಮಂದಿ ಪ್ರಯಾಣಿಕರಿದ್ದು ಆ ಪೈಕಿ 20 ಮಂದಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, 5 ಜನರಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಶಿವಮೊಗ್ಗದ ಮೆಗ್ಗಾನ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಗಾಯಾಳುಗಳಿಗೆ ಕೊಪ್ಪ  ಮತ್ತು ಎನ್‌ ಆರ್‌ ಪುರ ತಾಲೂಕು ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗಿದೆ. 

ಎನ್‌.ಆರ್‌.ಪುರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಸ್‌ ಜಖಂ ಗೊಂಡಿದೆ. 

Advertisement

Udayavani is now on Telegram. Click here to join our channel and stay updated with the latest news.

Next