Advertisement

Chikmagalur ಸಿಡಿಲು ಬಡಿದು ಓರ್ವ ಮೃತ್ಯು, ನಾಲ್ವರಿಗೆ ಗಾಯ

08:34 PM Jun 11, 2023 | Team Udayavani |

ಚಿಕ್ಕಮಗಳೂರು : ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿದ್ದು, ನಾಲ್ವರು ಸಣ್ಣಪುಟ್ಟ ಗಾಯಗಳಿಗೊಳಗಾದ ಘಟನೆ ಭಾನುವಾರ ನಡೆದಿದೆ.

Advertisement

ದೇವಸ್ಥಾನಕ್ಕೆ ಆಗಮಿಸಿದ್ದ ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ಮುಖೇಶ್(40) ಎನ್ನುವ ವ್ಯಕ್ತಿ ಮೃತ ದುರ್ದೈವಿ.ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವೈದ್ಯರು ವಾಪಸ್ಸು ಕಳುಹಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next