Advertisement

ಚಿಕ್ಕಮಗಳೂರು: ಚಾರ್ಮಾಡಿ ಘಾಟಿಯಲ್ಲಿ ಪಿಕಪ್ ವಾಹನ ಪಲ್ಟಿ

01:28 PM Jun 27, 2023 | Team Udayavani |

ಚಿಕ್ಕಮಗಳೂರು: ಮನೆಗೆ ಸಾಮಾಗ್ರಿಗಳನ್ನು ಸಾಗಿಸುತ್ತಿದ್ದ ಪಿಕಪ್ ವಾಹನ ಪಲ್ಟಿಯಾದ ಘಟನೆ ಚಾರ್ಮಾಡಿ ಘಾಟಿಯ ಆಲೇಖಾನ್ ಎಂಬಲ್ಲಿ ಘಟನೆ ನಡೆದಿದೆ.

Advertisement

ರಸ್ತೆ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಇದ್ದಕ್ಕಿದ್ದಂತೆ ವಾಹನ ಪಲ್ಟಿಯಾಗಿದೆ. ಪಿಕಪ್ ಚಾಲಕ ಪ್ರಾಣಾಪಾಯದಿಂದ‌ ಪಾರಾಗಿದೆ.

ಎತ್ತರದ ರಸ್ತೆ ಹಾಗೂ ಮಳೆಯಿಂದ ರಸ್ತೆ ತೇವಗೊಂಡಿದ್ದು, ಪಿಕಪ್ ಚಕ್ರ ರಸ್ತೆಯಿಂದ ಕೆಳಗಿಳಿಯುತ್ತಿದ್ದಂತೆ ಜಾರಿದೆ. ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬಣಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Advertisement

Udayavani is now on Telegram. Click here to join our channel and stay updated with the latest news.

Next