Advertisement
32 ಸರ್ಕಾರಿ ಶಾಲೆಗಳ ಪರೀಕ್ಷಾ ಕೇಂದ್ರ, 7ಅನುದಾನಿತ ಪ್ರೌಢಶಾಲೆಗಳ ಪರೀಕ್ಷಾ ಕೇಂದ್ರ ಹಾಗೂ 19 ಅನುದಾನರಹಿತ ಪರೀಕ್ಷಾ ಸೇರಿದಂತೆ 58 ಪರೀಕ್ಷಾ ಕೇಂದ್ರಗಳನ್ನು ಜಿಲ್ಲಾದ್ಯಂತ ತೆರೆಯಲಾಗಿದೆ. 2 ಕೇಂದ್ರಗಳಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, 9 ಕೇಂದ್ರಗಳಲ್ಲಿ 300ಕ್ಕೂ ಹೆಚ್ಚು ವಿದ್ಯಾರ್ಥಿಗಳು, 27ಕೇಂದ್ರಗಳಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು, 100ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ 20 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಹಾಗೂ ನಗರ ವ್ಯಾಪ್ತಿಯಲ್ಲಿ 23 ಮತ್ತು ಗ್ರಾಮೀಣ ಪ್ರದೇಶದ ವ್ಯಾಪ್ತಿಯಲ್ಲಿ 35 ಕೇಂದ್ರಗಳನ್ನು ತೆರೆಯಲಾಗಿದೆ. 58 ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಪರೀಕ್ಷಾ ಕೊಠಡಿಗಳನ್ನು ರಾಸಾಯನಿಕ ಬಳಸಿ ಶುಚಿಗೊಳಿಸಲಾಗಿದೆ. ಜಿಲ್ಲೆಯ 58 ಪರೀಕ್ಷಾ ಕೇಂದ್ರಗಳಲ್ಲಿ 746 ಕೊಠಡಿ ಮೇಲ್ವಿಚಾರಕರು, 58 ಕಸ್ಟೋಡಿಯನ್‌ಗಳು, ಸ್ಥಾನಿಕ ಜಾಗೃತದಳ, ಮುಖ್ಯ ಅಧೀಕ್ಷಕರು, ಮೊಬೈಲ್ ಸ್ವಾಧೀನಾಧಿಕಾರಿಗಳು, ಅಂತರ ಇಲಾಖಾ ವೀಕ್ಷಕರು, 8ಬ್ಲಾಕ್ ನೋಡಲ್ ಅಧಿಕಾರಿಗಳು, 5 ಜಿಲ್ಲಾ ಜಾಗೃತ ದಳದ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸಲಿದೆ.
Related Articles
Advertisement
ಪ್ರತಿ ಪರೀಕ್ಷೆ ಮುಗಿದ ನಂತರ ಕೊಠಡಿ ಶುಚಿಗೊಳಿಸಲು ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ವಿದ್ಯಾರ್ಥಿಗೆ 2 ಕಾಟನ್ ಮಾಸ್ಕ್ ಗಳ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಪ್ರತಿ ಕೇಂದ್ರದಲ್ಲಿ 50 ಎನ್-95 ಮಾಸ್ಕ್ ಗಳನ್ನು ಕಾಯ್ದಿರಿಸಿಕೊಳ್ಳುವ ವ್ಯವಸ್ಥೆಯನ್ನು ಸಿದ್ಧಪಡಿಸಿಕೊಳ್ಳಲಾಗಿದೆ. ಪ್ರತಿ ತಾಲೂಕಿಗೊಂದರಂತೆ ತುರ್ತು ಚಿಕಿತ್ಸ ವಾಹನವನ್ನು ಕಾಯ್ದಿರಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಪೋಷಕರ ದಟ್ಟಣೆ ನಿಯಂತ್ರಿಸಲು ಧ್ವನಿವರ್ಧಕ ಮೂಲಕ ಪರೀಕ್ಷೆಗೂ ಮೊದಲು ಮಾಹಿತಿ ನೀಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಕೆರೆತರಲು 60 ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೆಎಸ್‌ಆರ್‌ಟಿಸಿ ರೂಟ್ ಬಸ್‌ಗಳಲ್ಲಿ ವಿದ್ಯಾರ್ಥಿ ಪ್ರಯಾಣ ಮಾಡಿದರೆ ವಿದ್ಯಾರ್ಥಿ ಬಳಿಯಿರುವ ಪ್ರವೇಶ ಪತ್ರವನ್ನು ತೊರಿಸಿದರೆ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಪ್ರಯಾಣ ಬೆಳೆಸಬಹುದಾಗಿದೆ. 86 ಖಾಸಗಿ ಬಸ್‌ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಜಿಲ್ಲೆಯ 130 ಮಾರ್ಗಗಳಲ್ಲಿ 432 ಪಿಕ್‌ಅಪ್ ಕೇಂದ್ರಗಳನ್ನು ಗುರುತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಒಟ್ಟಾರೆ ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕೋವಿಡ್ ಸೋಂಕಿನ ಸಂಕಷ್ಟ ಕಾಲದಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಎದುರಿಸುತ್ತಿರುವ ವಿದ್ಯಾರ್ಥಿಗಳು ಯಾವುದೇ ಆತಂಕ ಪಡದೇ ಮನೆಯಿಂದ ಹೊರಡುವಾಗ ಇಲಾಖೆಯಿಂದ ನೀಡಿರುವ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಂಡು ಧೈರ್ಯವಾಗಿ ಪರೀಕ್ಷೆ ಬರೆಯಲು ಮುಂದಾಗಬೇಕು. ಜಿಲ್ಲಾಡಳಿತ ಜೂ.25 ರಿಂದ ಜು.04 ರ ವರೆಗೆ ನಡೆಯಲಿರುವ ಪರೀಕ್ಷೆಯ ಪರೀಕ್ಷಾ ಕೆಂದ್ರಗಳಲ್ಲಿ ಅಗತ್ಯವಿರುವ ಎಲ್ಲಾ ರೀತಿಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ.ಡಾ| ಬಗಾದಿ ಗೌತಮ್,
ಜಿಲ್ಲಾಧಿಕಾರಿ ಸರ್ಕಾರದ ನಿರ್ದೇಶನದಂತೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲು ಜಿಲ್ಲಾದ್ಯಂತ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಪ್ರತಿಯೊಬ್ಬ ವಿದ್ಯಾರ್ಥಿಯು ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ಬೇಕಾಗುವ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ.
ಸಿ.ನಂಜಯ್ಯ,
ಡಿಡಿಪಿಐ(ಆಡಳಿತ)