Advertisement
ಜಿಲ್ಲಾದ್ಯಂತ 144ನೇ ಸೆಕ್ಷನ್ ಜಾರಿಗೊಳಿಸಲಾಗಿದ್ದು, ಪ್ರಾರ್ಥನಾ ಮಂದಿರಗಳು, ಹೆಚ್ಚಿನ ಜನ ಸೇರುವ ಪ್ರದೇಶಗಳು, ಪಕ್ಷದ ಕಚೇರಿಗಳು, ಸಭೆ-ಸಮಾರಂಭಗಳು ನಡೆಯುವ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಹೆಚ್ಚು ಜನ ಸೇರುವ ಪ್ರದೇಶಗಳಲ್ಲಿ ಶ್ವಾನದಳ ಹಾಗೂ ಬಾಂಬ್ ಪತ್ತೆ ದಳದವರು ತಪಾಸಣೆ ನಡೆಸಿದರು.
Related Articles
Advertisement
ತೀರ್ಪು ಬರುವ ನಿರೀಕ್ಷೆಯಲ್ಲಿದ್ದ ಕಾರಣ ಜಿಲ್ಲೆಯ ಸೂಕ್ಷ್ಮ ಪ್ರದೇಶ, ಜನ ಸೇರುವ ಹಾಗೂ ಸಭೆ- ಸಮಾರಂಭಗಳು ನಡೆಯುವ ಪ್ರದೇಶಗಳನ್ನು ಗುರುತಿಸಿದ್ದು, ಆ ಎಲ್ಲಾ ಪ್ರದೇಶಗಳಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ದೇವಸ್ಥಾನಗಳು, ಮಸೀದಿ ಸೇರಿದಂತೆ ಧಾರ್ಮಿಕ ಸ್ಥಳಗಳಿಗೂ, ಬಿಜೆಪಿ ಕಚೇರಿ ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಾಲಯಗಳಿಗೂ ಶನಿವಾರ ಬೆಳಗಿನಿಂದಲೇ ಭದ್ರತೆ ಒದಗಿಸಿರುವುದಾಗಿ ತಿಳಿಸಿದರು.
ಈ ಭದ್ರತಾ ವ್ಯವಸ್ಥೆ ನ.12ರ ವರೆಗೂ ಮುಂದುವರೆಯುವ ಸಂಭವವಿದೆ. 144ನೇ ವಿಧಿ ಜಾರಿಗೊಳಿಸಿರುವುದರಿಂದ ಸಭೆ, ಮೆರವಣಿಗೆ, ಶಸ್ತ್ರ ಹಿಡಿದು ತಿರುಗಾಡುವುದನ್ನು ಹಾಗೂ ಗುಂಪು ಕಟ್ಟಿಕೊಂಡು ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದರು.
ಈ ಬಾರಿ ಪೊಲೀಸ್ ಇಲಾಖೆ ಜಿಲ್ಲೆಯ ಎಲ್ಲಾ ಸಮುದಾಯದ ಮುಖಂಡರಿಗೆ ಸಾಮಾಜಿಕ ಜಾಲತಾಣಗಳ ಮೂಲಕ ಹಾಗೂ ಇನ್ನಿತರ ಸಂವಹನ ಮಾರ್ಗಗಳ ಮೂಲಕ ಶಾಂತಿ ಕಾಪಾಡಲು ಮನವಿ ಮಾಡಿತ್ತು. ಶಾಂತಿ ಭಂಗ ಮಾಡುವ ವ್ಯಕ್ತಿಗಳನ್ನು ಗುರುತಿಸಿತ್ತು. ಆದರೆ, ಯಾರನ್ನೂ ಸಹ ವಶಕ್ಕೆ ಪಡೆದಿಲ್ಲ ಎಂದು ಹೇಳಿದರು.
ಫೇಸ್‌ಬುಕ್‌ನಲ್ಲಿ ಯಾವುದೇ ರೀತಿಯ ಆತಂಕಕಾರಿ ಹಾಗೂ ಉದ್ರೇಕಕಾರಿ ಸಂದೇಶ ಕಳುಹಿಸುವುದು, ಭಾವನೆಗಳಿಗೆ ಧಕ್ಕೆ ತರುವ ವ್ಯಂಗ್ಯ ಚಿತ್ರಗಳನ್ನು ಬಳಸಿದಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ಇಲಾಖೆ ತೀರ್ಮಾನಿಸಿತ್ತು. ಈ ರೀತಿ ಪ್ರಕರಣಗಳನ್ನು ಅತ್ಯಂತ ತೀವ್ರ ಅಪರಾಧ ಕೃತ್ಯವೆಂದು ಭಾವಿಸಿದೆ ಎಂದು ತಿಳಿಸಿದರು.
ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಉತ್ತಮವಾಗಿರುವ ಹಿನ್ನೆಲೆಯಲ್ಲಿ ನ.10 ರಂದು ನಡೆಯುವ ಈದ್ ಮಿಲಾದ್ ಮೆರವಣಿಗೆಗೆ ಈವರೆಗೂ ಯಾವುದೇ ರೀತಿಯ ನಿರ್ಬಂಧವನ್ನು ವಿಧಿಸಿಲ್ಲ. ಶನಿವಾರ ರಾತ್ರಿ ಪರಿಸ್ಥಿತಿ ಅವಲೋಕಿಸಿ ಯಾವುದೇ ರೀತಿ ಗಲಭೆ ಅಥವಾ ಅಶಾಂತಿ ಸಂಭವಿಸುವ ಮುನ್ಸೂಚನೆ ಸಿಕ್ಕಲ್ಲಿ ಆನಂತರ ಬೇರೆ ರೀತಿಯಲ್ಲಿ ನಿರ್ಧಾರವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ. ಪರಿಸ್ಥಿತಿ ಅವಲೋಕಿಸಿದಾಗ ಶಾಂತಿ ಕದಡುವ ಯಾವುದೇ ಸೂಚನೆ ಇಲ್ಲ ಎಂದರು.