Advertisement

ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕಳ್ಳನ ಬಂಧನ; 4 ಲಕ್ಷ ಮೌಲ್ಯದ 11 ಬೈಕ್ ವಶ

11:29 AM Dec 26, 2022 | Team Udayavani |

ಚಿಕ್ಕಮಗಳೂರು: ರಾತ್ರೋ ರಾತ್ರಿ ಬೈಕ್ ಎಗರಿಸುತ್ತಿದ್ದ ಕತರ್ನಾಕ್ ಕಳ್ಳನನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ.

Advertisement

ಕಡೂರು ತಾಲೂಕಿನ ಶೆಟ್ಟಿಹಳ್ಳಿಯ ಮೋಹನ್ ಬಂಧಿತ ಆರೋಪಿ.

ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ಕಳ್ಳತನ ಹಿನ್ನೆಲೆ ತನಿಖೆ ಕೈಗೊಂಡಿದ್ದ ಪೊಲೀಸರು ಆರೋಪಿ ಮೋಹನ್ ನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನಿಂದ 4 ಲಕ್ಷ ಮೌಲ್ಯದ 11 ಬೈಕ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನಿಖೆ ವೇಳೆ ಬೆಂಗಳೂರು, ತುಮಕೂರು ಸೇರಿದಂತೆ ವಿವಿದ ಜಿಲ್ಲೆಯ 11 ಪ್ರಕರಣ ಬಯಲಾಗಿದೆ. ಬೈಕ್ ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಎಂಬುದು ಕೂಡ ತನಿಖೆಯಲ್ಲಿ ಬಯಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಕಡೂರು ಸಿಪಿಐ ಶಿವಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

Advertisement

Advertisement

Udayavani is now on Telegram. Click here to join our channel and stay updated with the latest news.

Next