Advertisement

ಕಾರ್ಮಿಕರ ಪಿಂಚಣಿ ನೋಂದಣಿ ನಡೆಸಿ

03:36 PM Jan 17, 2020 | Naveen |

ಚಿಕ್ಕಮಗಳೂರು: ದೇಶದ ಅಸಂಘಟಿತ ವಲಯದ ಕಾರ್ಮಿಕರಿಗೆ ಸಾಮಾಜಿಕ ಭದ್ರತೆ ಒದಗಿಸಲು ಸರ್ಕಾರ ಜಾರಿಗೆ ತಂದಿರುವ ಪ್ರಧಾನ ಮಂತ್ರಿ ಶ್ರಮ್‌ ಯೋಗಿ ಮಾನ್‌ಧನ್‌ ಯೋಜನೆಯಡಿ ಪಿಂಚಣಿಗಾಗಿ ಸಮರ್ಪಕವಾಗಿ ಕಾರ್ಮಿಕರ ನೋಂದಣಿ ಕಾರ್ಯ ನಡೆಸಬೇಕು ಎಂದು ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಅಧಿಕಾರಿಗಳಿಗೆ ಸೂಚಿಸಿದರು.

Advertisement

ಗುರುವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪಿಎಂ-ಎಸ್‌ವೈಎಂ ಪಿಂಚಣಿಯ ಅನುಷ್ಠಾನ ಕುರಿತ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಇ.ಎಸ್‌.ಐ, ಪಿ.ಎಫ್‌, ಎನ್‌.ಪಿ.ಎಸ್‌ ಯೋಜನೆಗೆ ಪ್ರಯೋಜನ ಪಡೆಯದ ಅಸಂಘಟಿತ ವಲಯದ ಕಾರ್ಮಿಕರು ಈ ಯೋಜನೆಯ ಫಲಾನುಭವಿಗಳಾಗಲು ಅರ್ಹರಾಗಿದ್ದು, 18-40 ವರ್ಷದೊಳಗಿನ ಕಾರ್ಮಿಕರೆಲ್ಲಾ ಪಿಂಚಣಿಗಾಗಿ ನೋಂದಣಿ ಮಾಡಿಕೊಳ್ಳಬಹುದು ಎಂದು ಹೇಳಿದರು.

ಅಂಗಡಿ ಮಾಲಿಕರು, ಚಿಲ್ಲರೆ ವ್ಯಾಪಾರಿಗಳು, ಅಕ್ಕಿ ಗಿರಣಿ ಮಾಲಿಕರು, ಎಣ್ಣೆ ಗಿರಣಿ ಮಾಲಿಕರು, ವರ್ಕ್‌ಶಾಪ್‌ ಮಾಲಿಕರು, ಕಮಿಷನ್‌ ಏಜೆಂಟ್ಸ್‌, ರಿಯಲ್‌ ಎಸ್ಟೇಟ್‌ ಬ್ರೋಕರ್‌ಗಳು, ಸಣ್ಣ ಹೊಟೇಲ್‌ ಹಾಗೂ ರೆಸ್ಟೋರೆಂಟ್‌ ಮಾಲಿಕರು, ಸಣ್ಣ ವ್ಯಾಪಾರಿಗಳು ಮತ್ತು ಸ್ವಯಂ ಉದ್ಯೋಗಿಗಳು ಈ ಯೋಜನೆಯ ಫಲಾನುಭವಿಗಳಾಗಲಿದ್ದಾರೆ ಎಂದು ತಿಳಿಸಿದರು.

ಮಾಸಿಕ ಆದಾಯ 15 ಸಾವಿರ ರೂ. ಅಥವಾ ಅದಕ್ಕಿಂತ ಕಡಿಮೆ
ಆದಾಯ ಹೊಂದಿರುವ, ಆದಾಯ ತೆರಿಗೆ ಪಾವತಿಸದವರು ಹಾಗೂ ಇತರೆ ಯಾವುದೇ ಪಿಂಚಣಿ ಯೋಜನೆಯ ಉಪಯೋಗ ಪಡೆಯುತ್ತಿರುವವರು ನೋಂದಣಿಯಾಗಲು ಸಾಧ್ಯವಿಲ್ಲ ಎಂದು ತಿಳಿಸಿದರು.

Advertisement

ಅರ್ಹ ಫಲಾನುಭವಿಗಳು ಆಧಾರ್‌ ಕಾರ್ಡ್‌, ಬ್ಯಾಂಕ್‌ ಪಾಸ್‌ ಪುಸ್ತಕದ ಜೊತೆಗೆ ತಮ್ಮ ಹತ್ತಿರದ ಕಾಮನ್‌ ಸರ್ವಿಸ್‌ ಸೆಂಟರ್‌ಗೆ ತೆರಳಿ ನಿಗ ದಿಪಡಿಸಿದ ಮೊತ್ತವನ್ನು ಪಾವತಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು ಎಂದರು.

ಎಲ್ಲಾ ಇಲಾಖೆಗಳು ಮತ್ತು ಸಂಘಟನೆಗಳು ಸಮನ್ವಯದಿಂದ ಕೆಲಸ ಮಾಡಿ ಅಸಂಟಿತ ವಲಯದ ಕಾರ್ಮಿಕರಲ್ಲಿ ಅರಿವು ಮೂಡಿಸಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಪಿ.ಎಂ-ಎಸ್‌.ವೈ.ಎಂ.ಪಿಂಚಣಿ ಯೋಜನೆಯ ಪ್ರಯೋಜನ ಪಡೆಯಲು
ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮನವೊಲಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

ಪಿ.ಎಂ-ಎಸ್‌.ವೈ.ಎಂ. ಪಿಂಚಣಿ ಯೋಜನೆಯಡಿ ಜಿಲ್ಲೆಯಲ್ಲಿ ಕೇವಲ 1800 ಕಾರ್ಮಿಕರು ನೋಂದಣಿಯಾಗಿದ್ದು, ಉಳಿದ ಕಾರ್ಮಿರನ್ನು ಶೀಘ್ರವಾಗಿ ಯೋಜನೆಗೆ ಸೇರಿಸಬೇಕು ಎಂದು ತಿಳಿಸಿದರು. ಸಭೆಯಲ್ಲಿ ಹಿರಿಯ ಕಾರ್ಮಿಕ ಇನ್ಸ್ಪೆಕ್ಟರ್‌ ರವಿ, ಕಾರ್ಮಿಕ ಅಧಿ ಕಾರಿ ಕೃಷ್ಣಮ್ಮ, ಕಾರ್ಮಿಕ ಆಯುಕ್ತ ಜಾನ್ಸನ್‌, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್‌ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next