ಚಿಕ್ಕಮಗಳೂರು: ಕಾರು-ಕ್ರೂಸರ್ ಢಿಕ್ಕಿಯಾದ ಪರಿಣಾಮ ಶಾಲಾ ವಿದ್ಯಾರ್ಥಿಗಳಿದ್ದ ಕ್ರೂಸರ್ ಪಲ್ಟಿಯಾಗಿ ಹತ್ತು ವಿಧ್ಯಾರ್ಥಿಗಳಿಗೆ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿ ಗೇಟ್ ಬಳಿ ನಡೆದಿದೆ.
Advertisement
ಕಲಬುರುಗಿ ಜಿಲ್ಲೆಯ ಅಫಜಲ್ಪುರದಿಂದ ಪ್ರವಾಸಕ್ಕೆ ಬಂದಿದ್ದ ವಿಧ್ಯಾರ್ಥಿಗಳು ಪ್ರವಾಸ ಮುಗಿಸಿ ತಡರಾತ್ರಿ ಅಫಜಲ್ಪುರಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ.
ಗಂಭೀರ ಗಾಯಗೊಂಡ ವಿದ್ಯಾರ್ಥಿಗಳನ್ನು ಅಜ್ಜಂಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕ್ರೂಸರ್ ವಾಹನದಲ್ಲಿ ಶಿಕ್ಷಕರು ವಿದ್ಯಾರ್ಥಿಗಳನ್ನು ಪ್ರವಾಸಕ್ಕೆ ಕರೆತಂದಿದ್ದರು.
ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡದಿದೆ.