Advertisement

ಸೋಂಕು ತಡೆಗೆ ಮುನ್ನೆಚ್ಚರಿಕೆ ವಹಿಸಿ

05:07 PM Apr 12, 2020 | Naveen |

ಚಿಕ್ಕೋಡಿ: ಕೊರೊನಾ ವೈರಸ್‌ ತಡೆಗಟ್ಟಲು ಎಲ್ಲ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡು, ಕೋವಿಡ್ ತಡೆಗೆ ಮುನ್ನೆಚರಿಕೆ ವಹಿಸಬೇಕು ಎಂದು ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Advertisement

ನಿಪ್ಪಾಣಿ ಕ್ಷೇತ್ರ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಶನಿವಾರ ನಡೆದ ಅಧಿಕಾರಿಗಳ ಸಭೆ ಹಾಗೂ ಗ್ರಾಮಸ್ಥರ ಜಾಗೃತಿಯಲ್ಲಿ ಅವರು ಮಾತನಾಡಿದರು. ಆರೋಗ್ಯ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಅಧಿಕಾರಿಗಳು, ಪಪಂ ಅಧಿಕಾರಿಗಳು, ಪೊಲೀಸ್‌ ಸಿಬ್ಬಂದಿ ಹಾಗೂ ಪೌರ ಕಾರ್ಮಿಕರು ಹೆಚ್ಚಿನ ನಿಗಾ ವಹಿಸಿ ಕಾರ್ಯನಿರ್ವಹಿಸಬೇಕು. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮನೆ-ಮನೆಗೆ ತೆರಳಿ ಸರ್ವೇ ಮಾಡುತ್ತಿದ್ದು, ಅವರಿಗೆ ಜನರು ಸಹಕರಿಸಬೇಕು. ಕಬ್ಬು ಕಟಾವು, ಅಲೇಮಾರಿ ಅಥವಾ ವಲಸೆ ಬಂದ ಕಾರ್ಮಿಕರಿಗೆ ಉಚಿತವಾಗಿ ಆಹಾರಧಾನ್ಯ ವಿತರಿಸಬೇಕು ಎಂದರು.

ಹೋಮ್‌ ಕ್ವಾರಂಟೈನ್‌ನಲ್ಲಿದ್ದ ವ್ಯಕ್ತಿಗಳ ಬಗ್ಗೆ ನಿಗಾ ವಹಿಸಿ ದೈನಂದಿನ ಮಾಹಿತಿ ತಿಳಿಸಬೇಕು. ಹೆಚ್ಚಿನ ದರದಲ್ಲಿ ದಿನಸಿ ವಸ್ತುಗಳ ಮಾರಾಟ ಮಾಡುವವರ ಮೇಲೆ ಕ್ರಮ ಕೈಗೊಂಡು ಅವರ ಲೈಸನ್‌ ರದ್ದು ಮಾಡಬೇಕು. ಪಟ್ಟಣದಲ್ಲಿ ಶೀಘ್ರವೇ ದ್ರಾವಣ ಸಿಂಪಡಣೆ ಸುರಂಗ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು ಎಂದರು.

ಅಲ್ಲದೇ ನೀರು ಸರಬರಾಜು, ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಔಷ ಧಿ ವಿತರಣೆ, ಫಾಗಿಂಗ್‌, ರೇಷನ್‌ ಅಂಗಡಿಗಳಲ್ಲಿ ರೇಷನ್‌ ವಿತರಣೆ ಬಗ್ಗೆ ಮಾಹಿತಿ ಪಡೆದರು. ತಹಶೀಲ್ದಾರ್‌ ಪ್ರಕಾಶ ಗಾಯಕವಾಡ, ತಾಪಂ ಇಒ ಕೆ.ಎಸ್‌. ಪಾಟೀಲ, ಮಲ್ಲಿಕಾರ್ಜುನ ಉಳಾಗಡ್ಡೆ, ಪಪಂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next