Advertisement
ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅನುದಾನದಡಿ ಮೊದಲ ಹಂತವಾಗಿ ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಅಗತ್ಯವಿರುವ ಮೂಲ ಸೌಕರ್ಯಗಳನ್ನು ಪೂರೈಸಲಾಗುತ್ತಿದೆ. ಅದರಂತೆ ಧಾರವಾಡ ಸಿವಿಲ್ ನ್ಯಾಯಾಲಯ ಆವರಣದಲ್ಲಿ ಸಿದ್ಧಗೊಂಡಿರುವ ಮಕ್ಕಳ ಸ್ನೇಹಿ ನ್ಯಾಯಾಲಯದಲ್ಲಿ ಸಂತ್ರಸ್ತ ಮಗುವಿಗೆ ಪ್ರತ್ಯೇಕ ಕೊಠಡಿ, ಆರೋಪಿತನಿಗೆ ಬೇರೆ ಕೊಠಡಿ, ಮಕ್ಕಳ ಶೌಚಾಲಯ, ಅಡುಗೆ ಮನೆ, ಅಗತ್ಯವಿದ್ದಲ್ಲಿ ಮಗುವಿನ ಪಾಲಕರಿಗೆ ರಾತ್ರಿ ವೇಳೆ ಉಳಿಯಲು ಕೊಠಡಿ, ಕಟ್ಟಡ ಆವರಣದಲ್ಲಿ ಮಕ್ಕಳಿಗಾಗಿ ಆಟದ ಮೈದಾನ, ಮಕ್ಕಳ ಪಾಲಕರಿಗೆ ಪ್ರತ್ಯೇಕ ಕೊಠಡಿ, ವಿಡಿಯೋ ಕಾನ್ಪರೆನ್ಸ್ ಕೊಠಡಿ, ಕುಡಿಯುವ ನೀರಿನ ವ್ಯವಸ್ಥೆ, ಮಕ್ಕಳಿಗಾಗಿ ಗ್ರಂಥಾಲಯ, ವರ್ಣಮಾಲೆ ಅಕ್ಷರಗಳಿರುವ ಚಾಪೆ (ಮ್ಯಾಟ್)ಗಳ ವ್ಯವಸ್ಥೆ, ನ್ಯಾಯಾಧೀಶರ ಕೋರ್ಟ್ ಹಾಲ್ ಹಾಗೂ ನ್ಯಾಯಾ ಧೀಶರಿಗೆ ಪ್ರತ್ಯೇಕ ಕೊಠಡಿ, ನಿರ್ವಹಣೆಗೆ ಸಿಬ್ಬಂದಿ ಸೇರಿದಂತೆ ವಿವಿಧ ಸೌಲಭ್ಯಗಳನ್ನು ಕಲ್ಪಿಸಲಾಗಿದೆ.
Advertisement
ಮಕ್ಕಳ ಸ್ನೇಹಿ ನ್ಯಾಯಾಲಯಕ್ಕೆ ಚಾಲನೆ
03:29 PM Feb 14, 2021 | Team Udayavani |
Advertisement
Udayavani is now on Telegram. Click here to join our channel and stay updated with the latest news.