ಉಡುಪಿ: ಇಲ್ಲಿನ ಮಲ್ಪೆ ಬಂದರಿನಲ್ಲಿ ಮೀನು ಆಯುವ ಬಳ್ಳಾರಿ ಮತ್ತು ಕೊಪ್ಪಳ ಮೂಲದ 17 ಮಕ್ಕಳನ್ನು ಗುರುವಾರ ಬೆಳಿಗ್ಗೆ ರಕ್ಷಣೆ ಮಾಡಲಾಗಿದೆ.
ಮಕ್ಕಳ ರಕ್ಷಣಾ ಘಟಕ ಹಾಗು ಇತರೆ ಇಲಾಖೆ ಅಧಿಕಾರಿಗಳು ಇಂದು ಬೆಳಿಗ್ಗೆ ಮಲ್ಪೆ ಬಂದರಿಗೆ ದಾಳಿ ನಡೆಸಿ ಮೀನು ಆಯುವ ಕಾರ್ಯದಲ್ಲಿ ತೊಡಗಿದ್ದ 17 ಮಂದಿ ಬಾಲ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕಾರ್ಮಿಕ ಇಲಾಖೆ, ಸಾರ್ವಜನೀಕ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಮಕ್ಕಳ ಸಹಾಯವಾಣಿ, ನಾಗರಿಕ ಸೇವಾ ಟ್ರಸ್ಟ್ ಉಡುಪಿ ಇದರ ಅಧಿಕಾರಿಗಳು ಜಂಟಿಯಾಗಿ ದಾಳಿ ನಡೆಸಿ ಬಾಲ ಕಾರ್ಮಿಕರ ರಕ್ಷಣೆ ಮಾಡಲಾಗಿದೆ.
ಇದನ್ನೂ ಓದಿ:ಫರಂಗಿಪೇಟೆ ಫೋಟೋಗ್ರಾಫರ್ ಕೊಲೆ ಯತ್ನ ಪ್ರಕರಣ: ಮೂವರು ಆರೋಪಿಗಳ ಬಂಧನ
ಈ ಮಕ್ಕಳು ಬಳ್ಳಾರಿ ಮತ್ತು ಕೊಪ್ಪಳ ಮೂಲದವರು ಎಂದು ಗುರುತಿಸಲಾಗಿದೆ. ಇವರನ್ನು ಮಲ್ಪೆ ಬಂದರಿನಲ್ಲಿ ಮೀನು ಆಯುವ ಕೆಲಸಕ್ಕೆ ದುಡಿಸಲಾಗುತ್ತಿತ್ತು. ಬಂದರಿನಿಂದ ರಕ್ಷಿಸಿದ 17 ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರು ಪಡಿಸಲಾಗಿದೆ.
ಕಾರ್ಯಾಚರಣೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಾಣಾಧಿಕಾರಿ ಸದಾನಂದ ನಾಯಕ್, ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ರಕ್ಷಾಣಾಧಿಕಾರಿ ಮಹೇಶ್ ದೇವಾಡಿಗ,ಕಾರ್ಮಿಕ ಅಧಿಕಾರಿ ಕುಮಾರ್, ಕಾರ್ಮಿಕ ನಿರೀಕ್ಷಕ ಪ್ರವೀಣ್, ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಷಯ ಪರಿವೀಕ್ಷಕ ನಾಗರಾಜ್, ರಕ್ಷಣಾ ಘಟಕದ ಸಮಾಜ ಕಾರ್ಯಕರ್ತರಾದ ಯೋಗೀಶ್, ಸುರಕ್ಷಾ, ಸುನಂದಾ, ಮಹಿಳಾ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸಾವಿತ್ರಿ, ಅರುಣಾ, ಮಲ್ಪೆ ಪೊಲೀಸ್ ಠಾಣಾ ಸಿಬ್ಬಂದಿಗಳಾದ ಸವಿತಾ, ಜಗದೀಶ್, ನಿತ್ಯಾನಂದ ಒಳಕಾಡು, ಶಿಲ್ಪಾ, ಸುಶ್ಮಿತಾ, ಮಕ್ಕಳ ಸಹಾಯವಾಣಿಯ ಕಸ್ತೂರಿ, ತ್ರಿವೇಣಿ, ನೇತ್ರ, ವಿಶ್ವಾಸದಮನೆ ಶಂಕರಪುರ ಸಂಸ್ಥೆಯ ಕ್ರಿಸ್ಟೋಪರ್ ಭಾಗವಹಿಸಿದ್ಧರು.