Advertisement

ಬಾಲ್ಯವಿವಾಹ ನಿಷೇಧ  ಜಾಥಾ ಉದ್ಘಾಟನೆ

12:50 AM Jan 25, 2019 | Team Udayavani |

ಉಡುಪಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿ.ಪಂ., ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಹಯೋಗದಲ್ಲಿ ಬಾಲ್ಯ ವಿವಾಹ ನಿಷೇಧ ಕುರಿತ ಜಾಥಾವನ್ನು ಉಡುಪಿಯ ಬೋರ್ಡ್‌ ಹೈಸ್ಕೂಲ್‌ ಮೈದಾನದಲ್ಲಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಸಿ.ಎಂ. ಜೋಷಿ ಗುರುವಾರ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು.

Advertisement

ಬೋರ್ಡ್‌ ಹೈಸ್ಕೂಲ್‌ನಿಂದ ಸೈಂಟ್‌ ಸಿಸಿಲಿ ಶಾಲೆ ವರೆಗೆ  ನಡೆದ ಜಾಥಾದಲ್ಲಿ “ಸಂದಿಗ್ಧ’ ಚಲನಚಿತ್ರದಲ್ಲಿ ನಟಿಸಿದ್ದ ಬಾಲ ನಟರಾದ ಸಂಜನಾ, ಕಿರಣ್‌, ನಿಶಾಂತ್‌ ಅವರನ್ನು ಅಲಂಕೃತ ವಾಹನದಲ್ಲಿ ಮೆರವಣಿಗೆ ಮಾಡಲಾಯಿತು.
ಜಾಥಾದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯೆ ಡಾ| ವನಿತಾ ತೊರವಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, “ಸಂದಿಗ್ಧ’ ಚಲನಚಿತ್ರದ ನಿರ್ದೇಶಕ ಮತ್ತು ನಟ ಸುಚೇಂದ್ರ ಪ್ರಸಾದ್‌, ನಟ ಮಹೇಶ್‌ ದೇವ್ರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ  ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್‌, ಜಿಲ್ಲಾ ಮಕ್ಕಳ 
ರಕ್ಷಣಾಧಿಕಾರಿ ವೀಣಾ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ್‌ ಆಚಾರ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಹಿರಿಯ ತಾಂತ್ರಿಕ ಮೇಲ್ವಿಚಾರಕಿ ಪೂರ್ಣಿಮಾ, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಉಮಾ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೋಭಾ, ಅಲಂಕಾರ್‌ ಚಿತ್ರಮಂದಿರದ ಜಗದೀಶ್‌ ಕುಡ್ವ ಮತ್ತಿತರರು ಉಪಸ್ಥಿತರಿದ್ದರು.
ಜಾಥಾದಲ್ಲಿ ಡೊಳ್ಳು ಕುಣಿತ, ವೀರಗಾಸೆ, ಕಂಸಾಳೆ ಮುಂತಾದ ಜಾನಪದ ತಂಡಗಳು ಭಾಗವಹಿಸಿದ್ದವು.

Advertisement

Udayavani is now on Telegram. Click here to join our channel and stay updated with the latest news.

Next