ಬೀದರ್: ಶಾಲೆಗಳು ತೆರೆಯದ ಕಾರಣ ಬಾಲ್ಯ ವಿವಾಹ ಮತ್ತು ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚುತ್ತಿದೆ ಎಂದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಆತಂಕ ವ್ಯಕ್ತಪಡಿಸಿದರು.
ಬಿದರ್ ಜಿಲ್ಲೆಗ ಭೇಟಿ ನೀಡಿದ ಅವರು, ಸದ್ಯಕ್ಕೆ ಶಾಲಾ ಕಾಲೇಜುಗಳನ್ನು ಆರಂಭಿಸುವ ಕುರಿತು ಯಾವುದೇ ನಿರ್ಧಾರ ಮಾಡಿಲ್ಲ. ಶಾಲಾ- ಕಾಲೇಜು ಪ್ರಾರಂಭಕ್ಕೆ ಸರ್ಕಾರಕ್ಕೆ ಯಾವುದೇ ಧಾವಂತ, ಅವಸರ ಇಲ್ಲ. ರಾಜ್ಯದ ಮಕ್ಕಳ ಹಿತ ಮತ್ತು ಪೋಷಕರ ಕಾಳಜಿಯನ್ನು ಮನಸ್ಸಿನಲ್ಲಿಟ್ಟುಕೊಂಡು ಮುಂದಿನ ಹೆಜ್ಜೆಯನ್ನು ಇಡುತ್ತೇವೆ. ಈ ವಿಷಯದಲ್ಲಿ ಯಾವುದೇ ಗೊಂದಲ ಬೇಡ ಎಂದು ಹೇಳಿದರು.
ಇದನ್ನೂ ಓದಿ:ಅಗತ್ಯ ಮೂಲ ಸೌಕರ್ಯಗಳಿಲ್ಲದ ಖಾಸಗಿ ಶಾಲೆಗಳ ವಿರುದ್ಧ ಕ್ರಮ: ಸುರೇಶ್ ಕುಮಾರ್ ಎಚ್ಚರಿಕೆ
ರಾಜ್ಯದಲ್ಲಿ ಸೆ. 21ರಿಂದ 9, 10ನೇ ತರಗತಿ, ಪಿಯುಸಿ ಪ್ರಥಮ, ದ್ವಿತೀಯ ವಿದ್ಯಾರ್ಥಿಗಳು ಶಾಲಾ- ಕಾಲೇಜಿಗೆ ಬರಬಹುದು. ಆದರೆ, ತರಗತಿ ನಡೆಸದೇ, ಸಂಬಂಧಪಟ್ಟ ಶಿಕ್ಷಕರಿಂದ ಗೊಂದಲ, ಪ್ರಶ್ನೆಗಳಿದ್ದರೆ ಮಾರ್ಗದರ್ಶನ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿತ್ತು. ಆದರೆ ರಾಜ್ಯ ಸರ್ಕಾರ ಅದನ್ನು ಸಹ ಮುಂದಕ್ಕೆ ಹಾಕಿದೆ ಎಂದರು.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ