Advertisement

ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧ

11:49 AM Jan 24, 2020 | Suhan S |

ಗುಂಡ್ಲುಪೇಟೆ: ಬಾಲ್ಯ ವಿವಾಹ ಶಿಕ್ಷಾರ್ಹ ಅಪರಾಧವಾಗಿದೆ. ಈ ಬಗ್ಗೆ ಎಲ್ಲರಲ್ಲಿಯೂ ಅರಿವು ಮೂಡಿಸಲಾಗುತ್ತಿದೆ ಎಂದು ತೆರಕಣಾಂಬಿ ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮಮತಾ ಹೇಳಿದರು.

Advertisement

ತಾಲೂಕಿನ ತೆರಕಣಾಂಬಿ ಗ್ರಾಮದ ಎಪಿಎಂಸಿ ಆವರಣದಲ್ಲಿ ಗುರುವಾರ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಆಯೋಜಿಸಿದ್ದ ಜಾಥಾಕ್ಕೆ ಚಾಲನೆ ನೀಡಿದ ಅವರು ಮಾತನಾಡಿ, ಮಕ್ಕಳ ಹಕ್ಕುಗಳನ್ನು ರಕ್ಷಿಸಬೇಕಾದ ಹೊಣೆ ಎಲ್ಲರ ಮೇಲಿದೆ. ಪಾಲಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ಕೊಡಿಸುವ ಜತೆಗೆ ಅವರ ಹಕ್ಕುಗಳನ್ನು ಗೌರವಿಸಬೇಕು. ಬಾಲ್ಯವಿವಾಹ ತಡೆಗಟ್ಟಲು ಕಾನೂನುಗಳನ್ನು ಜಾರಿಗೊಳಿಸಲಾಗಿದೆ. ಅಪ್ರಾಪ್ತ ಹೆಣ್ಣು ಮಕ್ಕಳನ್ನು ಮದುವೆ ಮಾಡುವ ಪಾಲಕರು, ಕಲ್ಯಾಣ ಮಂಟಪದ ಮಾಲೀಕರು ಹಾಗೂ ಪುರೋಹಿತರ ವಿರುದ್ಧವೂ ಪ್ರಕರಣ ದಾಖಲಿಸಿ, ಶಿಕ್ಷೆ ವಿಧಿಸಲಾಗುವುದು. ಆದ್ದರಿಂದ ಈ ಬಗ್ಗೆ ಜಾಥಾದಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಸಂತೆಯ ಆವರಣದಲ್ಲಿ ಮಳಿಗೆ ತೆರೆದು ಬಾಲ ಹಕ್ಕುಗಳ ಬಗ್ಗೆ ಕರಪತ್ರ ವಿತರಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು. ಗ್ರಾಪಂ ಕಾರ್ಯದರ್ಶಿ ಜಿ.ಶಿಲ್ಪಾ, ಬಾಲ ನ್ಯಾಯ ಮಂಡಲಿ ಸದಸ್ಯ ಸುರೇಶ್‌, ಮಕ್ಕಳ ರಕ್ಷಣಾ ಘಟಕದ ಶ್ರೀನಾಗು, ಅಶೋಕ್‌, ಮಕ್ಕಳ ಸಹಾಯವಾಣಿಯ ಮಹೇಶ್‌, ಸುಮಿತ್ರಾ, ಸರ್ಕಾರಿ ಕಿರಿಯ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಟಿ.ಪಿ.ಸುಬ್ರಹ್ಮಣ್ಯ ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next