ದೇವನಹಳ್ಳಿ: ಬೆಂಗಳೂರು ಗ್ರಾಮಾಂತರವನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಹೇಳಿದರು. ತಾಲೂಕಿನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ನಡೆದ ಬಾಲ್ಯ ವಿವಾಹ ತಡೆಯುವ ಜಿಲ್ಲಾ ಮಟ್ಟದ ಸಮನ್ವಯ ಮತ್ತು ಪರಿಶೀಲನೆ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಲಾಕ್‌ಡೌನ್ ಸಂದರ್ಭದಲ್ಲಿ ಜಿಲ್ಲೆಯಲ್ಲಿ 9 ಬಾಲ್ಯ ವಿವಾಹ ಪ್ರಕರಣಗಳು ವರದಿಯಾಗಿವೆ. ಇಂತಹ ಪ್ರಕರಣಗಳು ಮರುಕಳಿಸದಂತೆ ಗ್ರಾಮ, ತಾಲೂಕು ಹಾಗೂ ಜಿಲ್ಲಾ ಮಟ್ಟದ ಕಾವಲು ಸಮಿತಿಯು ಮುಂಜಾಗ್ರತೆ ವಹಿಸಬೇಕು. ಬಾಲ್ಯ ವಿವಾಹ ತಡೆ ಯುವ ನಿಟ್ಟಿನಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಾಗಿ ಹಮ್ಮಿಕೊಳ್ಳಬೇಕೆಂದು ನಿರ್ದೇಶಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವದ್ಧಿ ಇಲಾಖೆ ಜಿಲ್ಲಾ ಉಪನಿರ್ದೇಶಕಿ ಪುಷ್ಪಾ ಜಿ. ಮಾತನಾಡಿ, ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮೇ ಅಂತ್ಯದವರೆಗೆ ದೇವನಹಳ್ಳಿಯಲ್ಲಿ 3, ದೊಡ್ಡಬಳ್ಳಾಪುರದಲ್ಲಿ 3, ನೆಲಮಂಗಲದಲ್ಲಿ 2 ಹಾಗೂ ಹೊಸಕೋಟೆಯಲ್ಲಿ 2 ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಒಟ್ಟು 9 ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿದೆ.
ಈ ಪ್ರಕರಣಗಳನ್ನು ತಾಲೂಕು ಆಡಳಿತದ ಸಹಯೋಗದೊಂದಿಗೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ತಾಲೂಕು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮಕ್ಕಳು ಹಾಗೂ ಪೋಷಕರನ್ನು ಪೊಲೀಸರ ವಶಕ್ಕೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು. ಜಿಲ್ಲಾ ಸತ್ರ ನ್ಯಾಯಾಲಯಗಳ ನ್ಯಾಯಾಧೀಶ ನಟೇಶ್, ಜಿಲ್ಲಾ ಸಿಇಒ ಎನ್.ಎಂ.ನಾಗರಾಜ, ಅಪರ ಜಿಲ್ಲಾಧಿಕಾರಿ ಡಾ.ಜಗದೀಶ್.ಕೆ.ನಾಯಕ್, ತಾಲೂಕು ಶಿಶು ಅಭಿವೃದಿಟಛಿ ಯೋಜನಾಧಿಕಾರಿ ಸೇರಿದಂತೆ ಸಂಬಂ ಧಿಸಿದ ಇಲಾಖೆಗಳ ಜಿಲ್ಲಾ ಅಧಿಕಾರಿಗಳು ಇದ್ದರು.