ದಾವಣಗೆರೆ: ಅಪ್ರಾಪ್ತೆಯ ಮದುವೆ ತಡೆಯುವಲ್ಲಿ ಮಕ್ಕಳ ಸಹಾಯವಾಣಿ ಕೊಲ್ಯಾಬ್(ಡಾನ್ ಬಾಸ್ಕೋ ), ಜನ ಪ್ರತಿನಿಧಿಗಳು, ಅಧಿಕಾರಿಗಳ ತಂಡ ಯಶಸ್ವಿಯಾಗಿದೆ.
ದಾವಣಗೆರೆ ತಾಲೂಕಿನ ಗ್ರಾಮವೊಂದರ ಅಪ್ರಾಪ್ತೆಯ ವಿವಾಹ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಗುಡ್ಡೆಹಳ್ಳಿ ಗ್ರಾಮದ ೨೩ವರ್ಷದ ಯುವಕನ ಜೊತೆ ಫೆ. 10ರಂದು ನಡೆಯಲಿದೆ ಎಂದು ಅಪರಿಚಿತರೊಬ್ಬರು ಮಕ್ಕಳಸಹಾಯವಾಣಿಗೆ ಮಾಹಿತಿ ನೀಡಿದ್ದರು.
ಮಾಹಿತಿ ಪಡೆದ ಮಕ್ಕಳ ಸಹಾಯವಾಣಿಯ ಕೊಲ್ಯಾಬ್ ಡಾನ್ ಬಾಸ್ಕೋದ ಸಂಯೋಜಕ ಟಿ.ಎಂ. ಕೊಟ್ರೇಶ್, ಕಾರ್ಯಕರ್ತರಾದ ವಿ. ಮಂಜುಳಾ, ಟಿ.ನಾಗರಾಜ್ ಶಾಲೆಯಿಂದ ಜನ್ಮದಿನಾಂಕ ದೃಢೀಕರಣ ಪತ್ರ ಪಡೆದು ಪರಿಶೀಲಿಸಿದಾಗ ಬಾಲಕಿಗೆ 17 ವರ್ಷ 1 ತಿಂಗಳು ಎಂಬುದು ಬೆಳಕಿಗೆ ಬಂದಿತು.
ಕಾಡಜ್ಜಿ ಗ್ರಾಮ ಪಂಚಾಯತಿ ಕಾರ್ಯದರ್ಶಿ ಕೆಂಚಪ್ಪ, ಗ್ರಾಮ ಪಂಚಾಯತಿ ಅಧ್ಯಕ್ಷೆ ಗೀತಮ್ಮ, ಮುಖ್ಯ ಶಿಕ್ಷಕ ಕೆ.ಎಸ್. ನಾಗರಾಜ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯದರ್ಶಿನಿ, ಅಂಗನವಾಡಿ ಮೇಲ್ವಿಚಾ ರಕಿ ಕವಿತಾ, ಮುಖ್ಯ ಪೇದೆ ಎಸ್.ಆರ್.ಲಕ್ಷ್ಮಿಪತಿ ಹಾಗೂ ರೈತ ಮುಖಂಡ ಚಂದ್ರಪ್ಪ ಅವರೊಂದಿಗೆ ಬಾಲಕಿಯ ಮನೆಗೆ ಭೇಟಿ ನೀಡಿ ಬಾಲಕಿಯ ಪೋಷಕರಿಗೆ ಬಾಲ್ಯವಿವಾಹದ ದುಷ್ಪರಿಣಾಮಗಳ ಬಗ್ಗೆ ಹಾಗೂ ಶಿಕ್ಷೆ ಬಗ್ಗೆ ಅರಿವು ಮೂಡಿಸಿದರು.ಅಪ್ರಾಪ್ತೆಗೆ ಸೂಕ್ತ ಪೋಷಣೆ ಮತ್ತು ರಕ್ಷಣೆ ಕಲ್ಪಸುವ ಸಲುವಾಗಿ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಿ, ಸರ್ಕಾರಿ ಬಾಲಕಿಯರ ಬಾಲ ಮಂದಿರದಲ್ಲಿ ದಾಖಲಿಸುವ ಮೂಲಕ ಬಾಲ್ಯವಿವಾಹವನ್ನು ತಡೆಯುವಲ್ಲಿ ಯಶಸ್ವಿಯಾದರು.
ಇದನ್ನೂ ಓದಿ: ಚಿಕ್ಕೋಡಿ: ಸಂಬಂಧಿಯನ್ನೇ ಕೊಲೆಗೈದ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ