Advertisement

ಮಕ್ಕಳ ರಕ್ಷಣೆ ಎಲ್ಲರ ಕರ್ತವ್ಯವಾಗಲಿ

03:15 PM Mar 29, 2018 | |

ವಿಜಯಪುರ: ಮಕ್ಕಳ ಹಕ್ಕುಗಳ ಒಡಂಬಡಿಕೆಯನ್ವಯ ಪ್ರತಿಯೊಂದು ಮಗುವಿಗೂ ಮೂಲಭೂತ ಸೌಲಭ್ಯ ಕಲ್ಪಿಸಬೇಕು. ಮಕ್ಕಳ ಸಂರಕ್ಷಣೆ ಮಾಡುವುದು ನಮ್ಮ ಕರ್ತವ್ಯದ ಜೊತೆಗೆ ಅದು ನಮ್ಮ ಸ್ವಾಭಾವಿಕ ಸೇವೆಯಾಗಬೇಕು ಎಂದು ಜಿಲ್ಲಾಧಿಕಾರಿ ಎಸ್‌.ಬಿ.ಶೆಟ್ಟೆಣ್ಣವರ ಅಭಿಪ್ರಾಯಪಟ್ಟರು.

Advertisement

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ವರ್ಲ್ಡ್ ವಿಜನ್‌ ವಿಜಯಪುರ ಇವರ ಸಹಯೋಗದಲ್ಲಿ ನಗರದ ಚಿಂತನಾ ಹಾಲ್‌ನಲ್ಲಿ ಸರ್ಕಲ್‌ ಪೊಲೀಸ್‌ ಇನ್ಸ್‌ಪೆಕ್ಟರ್‌, ಪೊಲೀಸ್‌ ಸಬ್‌ ಇನ್ಸ್‌ಪೆಕ್ಟರ್‌, ಮಹಿಳಾ ಪೊಲೀಸ್‌ ಪೇದೆ ಹಾಗೂ ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿ ಸದಸ್ಯರಿಗೆ ಆಯೋಜಿಸಿದ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ-2012, ಬಾಲ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಹಾಗೂ ಮಕ್ಕಳ ಸಂರಕ್ಷಣೆ ಕುರಿತ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರಾಣಿಗಳು ಸಹ ತಮ್ಮ ಮಕ್ಕಳನ್ನು ರಕ್ಷಣೆ ಮಾಡುವಲ್ಲಿ ತಮನ್ನು ಸಮರ್ಪಿಸಿಕೊಳ್ಳುತ್ತವೆ. ಆದರೆ ಮನುಷ್ಯ ಜೀವಿಯು ಮಕ್ಕಳ ಮೇಲೆ ದೌರ್ಜನ್ಯ ಮಾಡಿದ ಪ್ರಕರಣಗಳನ್ನು ನಾವು ಕಾಣುತ್ತಿದ್ದೇವೆ ಎಂದು ವಿಷಾದಿಸಿದರು.

ಮಕ್ಕಳು-ಮಹಿಳೆಯರ ಮೇಲೆ ನಡೆಯುವ ದೌರ್ಜನ್ಯಗಳನ್ನು ತಡೆಯಲು ಎಲ್ಲ ಅಧಿಕಾರಿ ವರ್ಗದವರು ಕರ್ತವ್ಯದ ಜೊತೆಗೆ ಅದು ನಮ್ಮ ಸ್ವಾಭಾವಿಕ ಸೇವೆ ಆಗಬೇಕು. ಮುಗª ಮಕ್ಕಳ ಅಮಾಯಕತೆ ದುರ್ಬಳಕೆ ಮಾಡಿಕೊಂಡು ದೌರ್ಜನ್ಯ ಎಸಗುವವರ ವಿರುದ್ಧ ಕಾನೂನು ಕಠಿಣ ಕ್ರಮ ಕೈಗೊಳ್ಳಲಿದೆ ಎಂದರು.

ಒಂದನೇ ಹೆಚ್ಚುವರಿ ದಿವಾಣಿ ನ್ಯಾಯಾಧೀಶರೂ ಆಗಿರುವ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ಬೋಲಾ ಪಂಡಿತ ಮಾತನಾಡಿ, ಕಾನೂನಿನ ಜೊತೆ ಸಂಘರ್ಷಕ್ಕೊಳಗಾದ ಮಗುವನ್ನು ಬಾಲ ನ್ಯಾಯ ಮಂಡಳಿ ಮೂಲಕ ಮೇಲ್ವಿಚಾರಣೆ ಮಾಡಲಾಗುತ್ತದೆ. ಮಗುವಿನ್ನು ಪರಿವರ್ತನೆ ಮಾಡುವಾಗ ಕೇವಲ ಭೌತಿಕ ಅಂಶಗಳ ಆಧಾರದ ಮೇಲೆ ಅಧ್ಯಯನ ಮಾಡದೆ, ಆ ಮಗುವಿನ ಮಾನಸಿಕ ಅಂಶಗಳನ್ನು ಅಧ್ಯಯನ ಮಾಡಿ, ಸೂಕ್ತ ರೀತಿಯಾಗಿ ಆ ಮಗುವನ್ನು ಭವಿಷ್ಯತ್ತಿನ ಉತ್ತಮ ಪ್ರಜೆಯನ್ನಾಗಿ ಮಾಡುವಲ್ಲಿ ಎಲ್ಲರೂ ಶ್ರಮ
ವಹಿಸಬೇಕು ಎಂದು ಹೇಳಿದರು.

Advertisement

ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪ್ರಕಾಶ ನಿಕ್ಕಂ ಮಾತನಾಡಿ, ಮಕ್ಕಳ ಸಂರಕ್ಷಣೆ ಕುರಿತು ನಮ್ಮ ದೇಶದಲ್ಲಿ ಹಲವಾರು ಕಾನೂನುಗಳಿವೆ. ಅವುಗಳ ಕುರಿತು ಪ್ರತಿಯೊಬ್ಬ ಜನಸಾಮಾನ್ಯರಿಗೂ ಅರಿವು ಮೂಡಿಸಲು ಪದೇ ಪದೇ ಇಂಥ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುವುದು ಸೂಕ್ತ. ಮಕ್ಕಳ ಸಂರಕ್ಷಣೆ ವಿಷಯದಲ್ಲಿ ಪೊಲೀಸ್‌ ಇಲಾಖೆ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಕಾರ್ಯಾಗಾರದಲ್ಲಿ ಮಕ್ಕಳ ಸಂರಕ್ಷಣೆ ಕುರಿತು ಪಡೆದ ಮಾಹಿತಿ ಸಮರ್ಪಕವಾಗಿ ಜಾರಿಗೆ ತರಲು ಎಲ್ಲ ಪೊಲೀಸ್‌ ಠಾಣೆ ಸಿಬ್ಬಂದಿಗಳು ಪ್ರಾಮಾಣಿಕ ಕರ್ತವ್ಯ ನಿಭಾಯಿಸಬೇಕು ಎಂದರು. 

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಅಶೋಕ ಕೆಲವಡಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಿರ್ಮಲಾ ಸುರಪುರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ಕಲಾವತಿ ಕಾಂಬಳೆ, ಕಾರ್ಯಕ್ರಮ ವ್ಯವಸ್ಥಾಪಕರು ವರ್ಲ್ಡ್ ವಿಜನ್‌ ಸಂಸ್ಥೆಯ ಎಸ್‌.ಸುನಂದಾ ಇದ್ದರು. ಎಸ್‌.ಆರ್‌. ಕೊಣ್ಣೂರ ಪ್ರಾರ್ಥಿಸಿದರು. ಮೌನೇಶ ಪೋತದಾರ ಸ್ವಾಗತಿಸಿದರು. ಗುರುರಾಜ ಇಟಗಿ ನಿರೂಪಿಸಿದರು. ವಾಣಿಶ್ರೀ ನಿಂಬಾಳ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next