Advertisement

ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿ ನ ಸೂಚನೆ

03:38 PM Mar 09, 2021 | Team Udayavani |

ಬೆಳಗಾವಿ: ಮಕ್ಕಳ ಗ್ರಾಮಸಭೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ನಡೆಸಲು ಅನುಕೂಲವಾಗುವಂತೆ ನವೆಂಬರ್‌ ತಿಂಗಳಿನಲ್ಲಿ ಒಂದು ದಿನಾಂಕವನ್ನು ನಿಗದಿಪಡಿಸಿ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮಸಭೆ ನಡೆಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ ಹೇಳಿದರು.

Advertisement

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಸೋಮವಾರ ನಡೆದ ಮಕ್ಕಳ ಸಹಾಯವಾಣಿಯ ಸಲಹಾ ಸಮಿತಿ ಹಾಗೂ ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು,ಈ ಸಂಬಂಧ ಜಿಲ್ಲಾ ಪಂಚಾಯತ್‌ ಸಿಇಓ ಜೊತೆ ಚರ್ಚಿಸಿ ನಿರ್ಧರಿಸಲಾಗುವುದು ಎಂದರು.

ಸಾಮೂಹಿಕ ವಿವಾಹ ನಡೆಯುವ ಸ್ಥಳಗಳಲ್ಲಿ ಬಾಲ್ಯವಿವಾಹ ತಡೆಗಟ್ಟುವುದಕ್ಕೆ ಸಂಬಂಧಿಸಿದಂತೆ ಹಾಗೂ ಶಿಕ್ಷೆಯ ಕುರಿತು ಮಾಹಿತಿ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಕಂಡುಬಂದಾಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳುಹಾಗೂ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ಅದಕ್ಕೆ ತಡೆಯಾಜ್ಞೆ ತರಬೇಕು ಎಂದು ಸೂಚನೆ ನೀಡಿದರು.

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತಕ್ಷಣ ವಿಚಾರಿಸಿ ಕ್ರಮವಹಿಸಲು ಪೊಲೀಸ್‌ ಇಲಾಖೆಗೆ ಈಗಾಗಲೇ ತಿಳಿಸಲಾಗಿದೆ. ಆದಾಗ್ಯೂ ಪ್ರಕರಣ ದಾಖಲಿಸಲು ವಿನಾಕಾರಣ ವಿಳಂಬ ಮಾಡಿದರೆಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚನೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿಗಳು ಹೇಳಿದರು.

ಬಾಲಕಾರ್ಮಿಕ ಪದ್ಧತಿಗೆ ಕಡಿವಾಣ ಹಾಕಲು ಕೈಗಾರಿಕೆ ಮತ್ತು ಕಾರ್ಖಾನೆಗಳ ಮೇಲೆ ನಿಯಮಿತವಾಗಿ ದಾಳಿ ನಡೆಸಿ ಪರಿಶೀಲಿಸಬೇಕು. ಬಾಲಕಾರ್ಮಿಕರನ್ನು ನೇಮಿಸಿರುವುದು ಕಂಡುಬಂದರೆ ಸಂಸ್ಥೆಗಳ ಲೆ„ಸೆನ್ಸ್‌ ರದ್ದುಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

Advertisement

ಯುನೈಟೆಡ್‌ ಕಲ್ಯಾಣ ಸಂಸ್ಥೆಯ ಮಕ್ಕಳ ಸಹಾಯವಾಣಿ ಕೇಂದ್ರದ ಸಂಯೋಜಕರಾದ ಮಲ್ಲೇಶ್‌ ಕುಂದರಗಿ ಅವರು 2019 ರ ಏಪ್ರಿಲ್‌ ದಿಂದ 2021 ರ ಜನವರಿ ವರೆಗಿನ ಸಹಾಯವಾಣಿ -1098 ಕುರಿತ ಪ್ರಗತಿ ವರದಿಯನ್ನು ಮಂಡಿಸಿದರು. ಈ ಅವಧಿಯಲ್ಲಿ ತಪ್ಪಿಸಿಕೊಂಡ ಮಕ್ಕಳು, ಬಾಲಕಾರ್ಮಿಕರು, ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಕ್ಕಳು, ಶಾಲೆಯಿಂದ ಹೊರಗುಳಿದ ಮಕ್ಕಳು ಸೇರಿದಂತೆ ಒಟ್ಟಾರೆ 1855 ಪ್ರಕರಣಗಳಲ್ಲಿ ಮಕ್ಕಳ ಮನವಿಗೆ ಸ್ಪಂದಿಸಲಾಗಿದೆ. ಇದರಲ್ಲಿ 235 ಮಕ್ಕಳು ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರಾಗಿದ್ದಾರೆ ಎಂದು ತಿಳಿಸಿದರು.

1098 ಸಹಾಯವಾಣಿ ಸಂಖ್ಯೆಗೆ ಮಕ್ಕಳು ಅಥವಾ ಕಾಳಜಿಯುಳ್ಳ ವಯಸ್ಕರು ಕರೆ ಮಾಡಿದಾಗ ಚೆ„ಲ್ಡ್‌ಕೇಂದ್ರಗಳಿಗೆ ಸಂಪರ್ಕಿಸುತ್ತದೆ. ಚೆ„ಲ್ಡ್‌ ಲೆ„ನ್‌ ತಂಡವು60 ನಿಮಿಷದೊಳಗೆ ಮಗುವಿನ ನೆರವಿಗಾಗಿ ಧಾವಿಸಿ,ಮಗುವಿಗೆ ಪುನರ್ವಸತಿ ಕಲ್ಪಿಸುತ್ತದೆ ಮತ್ತು ಸತತವಾಗಿ ಅನುಸರಣೆ ಮಾಡುತ್ತದೆ ಎಂದು ಹೇಳಿದರು.

ಯುನೈಟೆಡ್‌ ಕಲ್ಯಾಣ ಸಂಸ್ಥೆಯ ಅಧ್ಯಕ್ಷ ಬಿ.ಓ.ತಿಪ್ಪೇಸ್ವಾಮಿ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಆನಂದ ಲೋಬೋ, ಕಾರ್ಮಿಕ ಅಧಿಕಾರಿ ತರನ್ನುಂ ಸಭೆಯಲ್ಲಿ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next