Advertisement
ಹೌದು. ಕೇಂದ್ರ ಸರಕಾರ ಈ ನಿಟ್ಟಿನಲ್ಲಿ ಹೆಜ್ಜೆಯಿಟ್ಟಿದೆ. ಕರ್ನಾಟಕ ಹಾಗೂ ಒಡಿಶಾದ ಗ್ರಾಮೀಣ ಕ್ರೀಡೆಗಳಲ್ಲಿ ಒಂದಾದ ಗಿಲ್ಲಿ ದಾಂಡು (ಚಿನ್ನಿ ದಾಂಡು) ಸೇರಿದಂತೆ ಒಟ್ಟು 75 “ಭಾರತೀಯ ಆಟ’ಗಳನ್ನು ಶಾಲೆಗಳಲ್ಲೇ ಕಲಿಸಿಕೊಡುವ ಘೋಷಣೆ ಮಾಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಎರಡನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಿದ್ದಾರೆ.
Related Articles
Advertisement
ಉದ್ದೇಶವೇನು?ಶಾಲೆಗಳಲ್ಲಿ ಭಾರತೀಯ ಕ್ರೀಡೆಗಳಿಗೆ ಉತ್ತೇಜನ ನೀಡುವುದು ಮಾತ್ರವಲ್ಲ ಶಾಲಾ ಮಟ್ಟದಲ್ಲೇ ಕ್ರೀಡೆಗಳು ಒಳಗೊಳ್ಳುವಂತೆ ಮಾಡುವುದು ಉದ್ದೇಶವಾಗಿದೆ ಎನ್ನುತ್ತಾರೆ ಮೂರ್ತಿ. ಗ್ರಾಮೀಣ ಶಾಲೆ ಗಳಲ್ಲಿ ಬಾಸ್ಕೆಟ್‌ಬಾಲ್, ಬ್ಯಾಡ್ಮಿಂಟನ್‌ನಂಥ ಆಟಗಳಿಗೆ ಬೇಕಾದ ಮೂಲ ಸೌಕರ್ಯ ಲಭ್ಯವಿಲ್ಲ. ಹೀಗಾಗಿ, ಅಂಥ ಶಾಲೆಗಳಲ್ಲಿ ದೈಹಿಕ ಶಿಕ್ಷಕರ ಮೂಲಕ ಸ್ಥಳೀಯ ಆಟ ಪರಿಚಯಿಸಲು ನಿರ್ಧರಿಸಿದ್ದೇವೆ. ಅವು ಗಳು ಹೆಚ್ಚು ಸೃಜನಾತ್ಮಕವಾಗಿದ್ದು, ದೇಶದ ಸಂಸ್ಕೃತಿಯೊಂದಿಗೆ ನಂಟು ಹೊಂದಿರುತ್ತವೆ ಎಂದೂ ಅವರು ಹೇಳಿದ್ದಾರೆ.