ಆಲೂರು (ಹಾಸನ): ಮಕ್ಕಳು ಆಟವಾಡುವ ಸಂದರ್ಭದಲ್ಲಿ ಸಿಕ್ಕಿದ ಜಿಲೆಟಿನ್ ತಂತಿಯನ್ನು, ಅರಿಯದೇ ಕಲ್ಲಿನಿಂದ ಜಜ್ಜುವಾಗ ಸ್ಫೋಟಗೊಂಡು ಎರಡು ಮಕ್ಕಳಿಗೆ ಗಾಯವಾಗಿರುವ ಘಟನೆ ವಾಟೆಹೊಳೆ ಜಲಾಶಯ ಸಮೀಪದಲ್ಲಿರುವ ಚನ್ನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಭವಿಸಿದೆ.
ಸೋಮವಾರ ಬೆಳಗ್ಗೆ ಗ್ರಾಮದ ರಘು ರವರ ಮಗ12 ವರ್ಷದ ಅಭಿಷೇಕ್, ರಂಗಸ್ವಾಮಿಯವರ ಮಗಳು ಕೃತಿಕಾ (ಕವನ) ಸೋದರ ಸಂಬಂಧಿ ಮಕ್ಕಳು ಆಟವಾಡುತ್ತಿರುವ ಸಂದರ್ಭದಲ್ಲಿ ಗೋಚರಿಸಿದ ಜಿಲೆಟಿನ್ (ಕೇಪ್) ತುಂಡನ್ನು ಕಲ್ಲಿನಿಂದ ಜಜ್ಜುವಾಗ ಸ್ಫೋಟಗೊಂಡಿದೆ. ಮಕ್ಕಳ ಮುಖಕ್ಕೆ ಗಂಭೀರ ಗಾಯವಾಗಿದೆ. ಸ್ಥಳೀಯರುಕೂಡಲೇ ಆ್ಯಂಬುಲೆನ್ಸ್ ಮೂಲಕ ಹಾಸನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಮಕ್ಕಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ಇದನ್ನೂ ಓದಿ:ಹೆಚ್ಚು ಮಕ್ಕಳಿರುವ ಪೋಷಕರಿಗೆ ಒಂದು ಲಕ್ಷ ರೂ. ಬಹುಮಾನ: ಮಿಜೋರಾಂ ಸಚಿವ
ಎತ್ತಿನಹೊಳೆ ಯೋಜನೆಗೊಳ ಪಡುವ ಕಾರ್ಮಿಕರು ಎರಡು ವರ್ಷಗಳ ಹಿಂದೆ ಚನ್ನಹಳ್ಳಿ ಗ್ರಾಮದಲ್ಲಿ ತಾತ್ಕಾಲಿಕವಾಗಿ ಶೆಡ್ ನಿರ್ಮಾಣ ಮಾಡಿಕೊಂಡು ವಾಸ ಮಾಡಿದ್ದರು. ಸ್ಥಳಾಂತರಗೊಳ್ಳುವ ಸಂದರ್ಭದಲ್ಲಿ ಕಲ್ಲು ಸ್ಫೋಟಿಸಲು ಬಳಸುತ್ತಿದ್ದ ಜಿಲೆಟಿನ್‌ನ್ನು ಆಕಸ್ಮಿಕವಾಗಿ ಬಿಟ್ಟು ಹೋಗಿರಬಹುದು. ಮಕ್ಕಳು ಆಟವಾಡುವ ಸಂದರ್ಭದಲ್ಲಿ ಘಟನೆ ಸಂಭವಿಸಿದೆ ಎಂದು ಪೊಲೀಸ್ ಇನ್‌ಸ್ಪೆಕ್ಟರ್ ಬಿ.ಜಿ.ಕುಮಾರ್ ತಿಳಿಸಿದ್ದಾರೆ.
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ, ಡಿವೈಎಸ್ಪಿ ಗೋಪಿ ಭೇಟಿ ನೀಡಿ ಪರಿಶೀಲನೆ ನಡೆಸಿದರು