Advertisement

ಉಡುಪಿ ರಥಬೀದಿಯಲ್ಲಿ ಚಿಣ್ಣರ ಕಲರವ

09:03 AM Jun 06, 2019 | Team Udayavani |

ಉಡುಪಿ: ಶ್ರೀಕೃಷ್ಣ ಮಠದ ಸುವರ್ಣ ಗೋಪುರ ಸಮರ್ಪಣೋತ್ಸವದ ಅಂಗವಾಗಿ ಜಿಲ್ಲೆಯ ಚಿಣ್ಣರ ಸಂತರ್ಪಣೆ ಶಾಲೆಗಳ ಸಹಸ್ರಾರು ವಿದ್ಯಾರ್ಥಿಗಳು ಶ್ರೀಕೃಷ್ಣ ಮಠದ ರಥಬೀದಿಯಲ್ಲಿ ಸೋಮವಾರ ಬ್ರಹ್ಮರಥ ಎಳೆದರು.

Advertisement

ಮಕ್ಕಳಿಗೆ ಸ್ವಾಮೀಜಿಗಳು ಹಾಗೂ ಭಕ್ತರು ಸಂಪೂರ್ಣ ಸಹಕಾರ ನೀಡಿದರು. ಯಾವುದೇ ಆಯಾಸವಿಲ್ಲದೆ ಮಕ್ಕಳು ರಥವನ್ನು ಎಳೆದದ್ದು ವಿಶೇಷವಾಗಿತ್ತು. ಚಿಣ್ಣರ ಸಂತರ್ಪಣೆಯ ಶಾಲೆಯ 4ರಿಂದ 7 ತರಗತಿ ವರೆಗಿನ ಆಸಕ್ತ ವಿದ್ಯಾರ್ಥಿಗಳು ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಚಿಣ್ಣರ ಶಾಲೆಯ ಮಕ್ಕಳನ್ನು ಆಯಾ ಶಾಲಾ ಪ್ರಾಧ್ಯಾಪಕರು ವಾಹನಗಳ ಮೂಲಕ ಕೃಷ್ಣ ಮಠಕ್ಕೆ ಕರೆ ತಂದಿದ್ದರು. ವಾಹನದ ವೆಚ್ಚವನ್ನು ಶ್ರೀ ಪರ್ಯಾಯ ಶ್ರೀ ಪಲಿಮಾರು ಮಠವೇ ಭರಿಸಿದೆ. ಮಕ್ಕಳಿಗೆ ಮಧ್ಯಾಹ್ನ ಹಾಗೂ ಸಂಜೆ ಫ‌ಲಾಹಾರದ ವ್ಯವಸ್ಥೆಯನ್ನೂ ಮಾಡಲಾಗಿತ್ತು.

ರಥೋತ್ಸವದಲ್ಲಿ ಪರ್ಯಾಯ ಪಲಿಮಾರು ಮಠದ ಶ್ರೀ ವಿದ್ಯಾಧೀಶತೀರ್ಥ ಸ್ವಾಮೀಜಿ, ಪೇಜಾವರ ಕಿರಿಯ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀ ವಿಶ್ವವಲ್ಲಭತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀ ವಿಶ್ವಪ್ರೀಯ ತೀರ್ಥ ಶ್ರೀಪಾದರು, ಅದಮಾರು ಕಿರಿಯ ಶ್ರೀ ಈಶಪ್ರೀಯ ತೀರ್ಥ ಶ್ರೀಪಾದರು, ಪಲಿಮಾರು ಕಿರಿಯ ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಶ್ರೀ ಬಾಳೆಗಾರು ಮಠದ ಶ್ರೀ ರಘುಭೂಷಣತೀರ್ಥ ಶ್ರೀಪಾದರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next