ಬಂಗಾರಪೇಟೆ: ಕೇಂದ್ರ ಬಿಜೆಪಿ ಸರ್ಕಾರವು ದೇಶದ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ದೇಶದಲ್ಲಿ ಪ್ರತಿ ವರ್ಷವೂ 25 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಶಾಲಾ ಕಟ್ಟಡಗಳನ್ನು ನಿರ್ಮಿ ಸಲಾಗುತ್ತಿದೆ ಎಂದು ಬಿಜೆಪಿ ಹಿರಿಯ ಮುಖಂಡ ಕೆ.ಚಂದ್ರಾರೆಡ್ಡಿ ಹೇಳಿದರು.
ತಾಲೂಕಿನ ಹುಣಸನಹಳ್ಳಿ ಗ್ರಾಮದಲ್ಲಿ ಸೋಮವಾರ ಮಕ್ಕಳ ದಿನದ ಅಂಗವಾಗಿ ಗ್ರಾಪಂ ಸದಸ್ಯ ಎಚ್.ಆರ್.ಶ್ರೀನಿವಾಸ್ ಹಾಗೂ ಸುರೇಶ್ ಬಾಬು ಅವರು ನೀಡಿ ರುವ ಉಚಿತ ಸಮವಸ್ತ್ರ ವಿತರಣೆ ಮಾಡಿ ಮಾತನಾಡಿದರು. ಎಲ್ಲಾ ದಾನಗಳಿಗಿಂತ ವಿದ್ಯಾದಾನ ಬಹಳ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ಪೈಪೋಟಿಯಾಗಿ ಬಡ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಬೇಕು ಎಂದರು.
ಇಂದಿನ ಆಧುನಿಕ ಯುಗದಲ್ಲಿ ಮುಖ್ಯವಾಗಿ ಮಕ್ಕಳು ಮೊಬೈಲ್ ವ್ಯಾಮೋಹವನ್ನು ಬದಿಗಿಟ್ಟು ಹೆಚ್ಚು ಹೆಚುÌ ಪುಸ್ತಕಗಳನ್ನು ಓದುವ ಹವ್ಯಾಸವನ್ನು ರೂಡಿಸಿಕೊಳ್ಳಬೇಕು. ಕೇಂದ್ರ ಸರ್ಕಾರವು ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚಿನ ಒತ್ತು ನೀಡುತ್ತಿರುವುದರಿಂದ ತಾಲೂಕಿನಲ್ಲಿಯೂ ಸಹ 21 ಶಾಲೆಗಳಲ್ಲಿ ನೂತನ ಕಟ್ಟಡಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಿದೆ ಎಂದರು.
ಜಿಪಂ ಮಾಜಿ ಸದಸ್ಯ ಬಿ.ವಿ.ಮಹೇಶ್ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಹೆಚ್ಚಿನ ಅನುದಾನದ ಮಂಜೂರು ಆಗುತ್ತಿದೆ. ಶಾಲಾ ಕೊಠಡಿಗಳ ರಿಪೇರಿ ಕಾರ್ಯಕ್ಕೆ 2.5 ಲಕ್ಷ ಅನುದಾನವನ್ನು ಮಂಜೂರು ಮಾಡಿಸಲು ಕ್ರಮಕೈಗೊಳ್ಳಲಾಗಿದ್ದು, ನಾಳೆಯೇ ಕೆಲಸವನ್ನು ಆರಂಭಿಸಿ ಎಂದು ಹೇಳಿದರು.
ಗ್ರಾಪಂ ಸದಸ್ಯ ಹುಣಸನಹಳ್ಳಿ ಎಚ್.ಆರ್. ಶ್ರೀನಿವಾಸ್, ಹುಲಿಬೆಲೆ ಎಂ.ಸುರೇಶ್, ಕೀಲುಕೊಪ್ಪ ಸುರೇಂದ್ರ, ವಿಎಸ್‌ಎಸ್‌ಎನ್ ಅಧ್ಯಕ್ಷ ಮುನಿಸ್ವಾಮಿ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಜೇಶ್, ಹಾಲು ಡೇರಿ ಅಧ್ಯಕ್ಷ ರಮೇಶ್, ಮುಖ್ಯ ಶಿಕ್ಷಕಿ ಪ್ರೇಮಲತಾ, ಶಿಕ್ಷಕಿರಾದ ಸರಸ್ವತಿ, ಅನಿತಾ, ಸತ್ಯಲೀಲಾ, ನಾಗರತ್ನಮ್ಮ, ನಿವೃತ್ತ ಶಿಕ್ಷಕಿ ರಾಣಿ ಜಲಜ, ಮುಖಂಡರಾದ ಸುರೇಶ್‌ಬಾಬು, ಸತೀಶ್‌ಗೌಡ, ಸಿ.ರಾಮಚಂದ್ರ, ಕೃಷ್ಣಪ್ಪ, ಕಾರ್ಯದರ್ಶಿ ಶ್ರೀನಿವಾಸ್, ಆನಂದ್, ರಾಜು, ಮೂರ್ತಿ ಇತರರಿದ್ದರು.