Advertisement

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

01:32 AM Nov 15, 2024 | Team Udayavani |

ಮಲ್ಪೆ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವುದು ಕರಾವಳಿ ಜನತೆಗೆ ಸದಾ ಹೆಮ್ಮೆಯಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕನಸಿನ ವಿಕಸಿತ ಭಾರತ ನಿರ್ಮಾಣಕ್ಕಾಗಿ ವಿದ್ಯಾರ್ಥಿಗಳ ಶಿಕ್ಷಣಕ್ಕೆ ವಿಶೇಷ ಪ್ರೋತ್ಸಾಹ ನೀಡುವ ಮೂಲಕ ವಿಶ್ವಗುರು ಭಾರತದ ಕನಸು ನನಸಾಗಿಸುವ ಸಂಕಲ್ಪವನ್ನು ನಾವೆಲ್ಲರೂ ಮಾಡೋಣ ಎಂದು ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

Advertisement

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ಸರಕಾರಿ ಹಾಗೂ ಅನುದಾನಿತ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ 15 ಲಕ್ಷ ರೂ. ವೆಚ್ಚದಲ್ಲಿ ಸುಮಾರು 20 ಸಾವಿರ ಪೆನ್‌ ವಿತರಣೆ ಕಾರ್ಯಕ್ರಮಕ್ಕೆ ತೆಂಕನಿಡಿಯೂರು ಗ್ರಾಮದ ಕೆಳಾರ್ಕಳಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಾಲನೆ ನೀಡಿ ಅವರು ಮಾತನಾಡಿದರು.

ಓರ್ವ ಶಾಸಕನಾಗಿ ಶಿಕ್ಷಣ ಹಾಗೂ ಆರೋಗ್ಯಕ್ಕೆ ಪ್ರಥಮ ಆದ್ಯತೆ ನೀಡುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯಪ್ರವೃತ್ತನಾಗಿದ್ದು, ಕ್ಷೇತ್ರದ ಜನತೆಯ ಸಹಕಾರದಿಂದ ಉಡುಪಿ ಕ್ಷೇತ್ರವನ್ನು ಮಾದರಿಯಾಗಿ ರೂಪಿಸಲು ಬದ್ಧ ಎಂದರು.

ವಿವಿಧ ಶಾಲೆ ಹಾಗೂ ಕಾಲೇಜುಗಳಿಗೆ ಸ್ಥಳೀಯ ಜನಪ್ರತಿನಿಧಿಗಳು, ಪಕ್ಷದ ಕಾರ್ಯಕರ್ತರು, ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ತೆರಳಿ ವಿದ್ಯಾರ್ಥಿಗಳಿಗೆ ಪೆನ್‌ ವಿತರಿಸಿ ಶುಭ ಹಾರೈಸಿದರು.

ಉಡುಪಿ ನಗರ ಬಿಜೆಪಿ ಅಧ್ಯಕ್ಷ ದಿನೇಶ್‌ ಅಮೀನ್‌, ತೆಂಕನಿಡಿಯೂರು ಗ್ರಾ. ಪಂ. ಉಪಾಧ್ಯಕ್ಷ ಅರುಣ್‌ ಜತ್ತನ್‌, ಮಾಜಿ ಅಧ್ಯಕ್ಷ ಕೃಷ್ಣ ಶೆಟ್ಟಿ, ಗಾಯತ್ರಿ, ತಾ. ಪಂ. ಮಾಜಿ ಸದಸ್ಯ ಶರತ್‌ ಬೈಲಕೆರೆ, ಗ್ರಾಮ ಪಂಚಾಯತ್‌ ಸದಸ್ಯರಾದ ವಿನೋದ್‌ ಸುವರ್ಣ, ಸತೀಶ್‌ ಪೂಜಾರಿ, ಮಾಲಿನಿ, ಪುಷ್ಪ ಉಮೇಶ್‌, ಪ್ರಮುಖರಾದ ವಿಜಯ ಪ್ರಕಾಶ್‌, ಕಿರಣ್‌ ಪಿಂಟೋ, ಕಾವೇರಿ ಗಾಣಿಗ ಹಾಗೂ ಶಾಲೆಯ ಶಿಕ್ಷಕರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next