Advertisement

Madikeri ಮಕ್ಕಳ ದಸರಾ: ಸಂಭ್ರಮಿಸಿದ ಪುಟಾಣಿಗಳು

11:37 PM Oct 20, 2023 | Team Udayavani |

ಮಡಿಕೇರಿ : ಪುಟಾಣಿ ಮಕ್ಕಳ ಸುಪ್ತ ಪ್ರತಿಭೆಯ ಅನಾವರಣದೊಂದಿಗೆ, ಸಾಮಾಜಿಕ ವ್ಯವಹಾರಗಳ ಕುರಿತು ಅವರಲ್ಲಿ ಅರಿವು ಮೂಡಿಸುವ ಮಕ್ಕಳ ಸಂತೆ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಮಕ್ಕಳ ದಸರಾ ಉತ್ಸವದ ಸಂಭ್ರಮ ಗಾಂಧಿ ಮೈದಾನದ ಉದ್ದಗಲಕ್ಕೂ ವ್ಯಾಪಿಸಿ ಸಂತಸ ಮೂಡಿಸಿತು.

Advertisement

ಮಡಿಕೇರಿ ದಸರಾ ಸಮಿತಿ ವತಿ ಯಿಂದ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್‌ ಸಹಯೋಗದಲ್ಲಿ ಆಯೋಜಿತ ಗೊಂಡ ಮಕ್ಕಳ ದಸರಾ ಉತ್ಸವಕ್ಕೆ ಶುಕ್ರವಾರ ಬೆಳಗ್ಗೆ ಜಿಲ್ಲಾ ಪಂಚಾಯತ್‌ ಸಿಇಒ ವರ್ಣಿತ್‌ ವೇಗಿ ಅವರು ಛದ್ಮವೇಷಧಾರಿ ಪುಟಾಣಿ ಮಕ್ಕಳೊಂದಿಗೆ ಜ್ಯೋತಿ ಬೆಳಗುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭ ಅವರು ಮಾತ ನಾಡಿ, ಮಕ್ಕಳಲ್ಲಿ ಸುಪ್ತವಾಗಿ ಅಡಗಿರುವ ಪ್ರತಿಭೆೆಯನ್ನು ಹೊರ ತರುವ ನಿಟ್ಟಿನಲ್ಲಿ ಅತ್ಯಂತ ರಚನಾತ್ಮಕ ಮತ್ತು ಕ್ರಿಯಾಶೀಲವಾದ ಮಕ್ಕಳ ದಸರಾ ಆಯೋಜನೆ ಶ್ಲಾಘನೀಯ. ದಸರಾಉತ್ಸವದ ಸಂದರ್ಭ ಮತ್ತೆಲ್ಲೂ ಕಂಡು ಬಾರದ ಮಕ್ಕಳ ದಸರಾವನ್ನು ಇಲ್ಲಿ ಆಯೋಜಿಸುವ ಮೂಲಕ ಮಕ್ಕಳಿಗೆ ವೇದಿಕೆ ಕಲ್ಪಿಸಿಕೊಡುವುತ್ತಿರುವುದು ಉತ್ತಮವಾದ ಪ್ರಯತ್ನ ಎಂದವರು ಹೇಳಿದರು.

600ಕ್ಕೂ ಮಿಕ್ಕಿ ಮಕ್ಕಳ ಕಲರವ
ಮಡಿಕೇರಿಯಲ್ಲಿ ಜರಗಿದ 10ನೇ ವರ್ಷದ ಮಕ್ಕಳ ದಸರಾದಲ್ಲಿ 600ಕ್ಕೂ ಅಧಿಕ ಮಕ್ಕಳು ಪಾಲ್ಗೊಂಡು ಸಂಭ್ರಮಿಸಿದರು. ಮಕ್ಕಳ ಸಂತೆಯಲ್ಲಿ ಈ ಬಾರಿ 122 ಅಂಗಡಿಗಳು ಇದ್ದರೆ, ಮಕ್ಕಳ ಅಂಗಡಿಯಲ್ಲಿ 74 ಅಂಗಡಿಗಳಿದ್ದವು. ಮಕ್ಕಳ ಮಂಟಪದಲ್ಲಿ 18 ಸ್ಪರ್ಧಾ ತಂಡಗಳು, ಛದ್ಮವೇಷ ಸ್ಪರ್ಧೆಯಲ್ಲಿ 66 ಸ್ಪರ್ಧಿಗಳು ಮತ್ತು ಕ್ಲೇ ಮಾಡೆಲಿಂಗ್‌ ಸ್ಪರ್ಧೆಗೆ 17 ಸ್ಪರ್ಧಿಗಳು ಪಾಲ್ಗೊಂಡಿದ್ದರು. ಮಕ್ಕಳ ದಸರಾದಲ್ಲಿ ಈ ವರ್ಷ 620ಕ್ಕೂ ಅಧಿಕ ಮಕ್ಕಳು ವಿವಿಧ ಸ್ಪರ್ಧೆಗಳಲ್ಲಿ ಪಾಲ್ಗೊಂಡು ದಾಖಲೆಯ ಸಂಖ್ಯೆಗೆ ಕಾರಣರಾದರು.

ಮಡಿಕೇರಿ ದಸರಾ: ಮದ್ಯ ಮಾರಾಟ ನಿಷೇಧ
ಮಡಿಕೇರಿ: ನಾಡಹಬ್ಬ ದಸರಾ ಆಚರಣೆ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅ. 24ರ ಬೆಳಗ್ಗೆ 6ರಿಂದ 25ರ ಬೆಳಗ್ಗೆ 10ರ ವರೆಗೆ ಮಡಿಕೇರಿ ನಗರ ಠಾಣಾ ವ್ಯಾಪ್ತಿಯ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಮತ್ತು ಗೋಣಿಕೊಪ್ಪ, ಪೊನ್ನಂಪೇಟೆ ಠಾಣಾ ವ್ಯಾಪ್ತಿಯ ಸುತ್ತಮುತ್ತ 10 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮದ್ಯದ ಅಂಗಡಿ, ಬಾರ್‌, ಹೊಟೇಲ್‌, ರೆಸ್ಟೋರೆಂಟ್‌ ಮತ್ತು ಕ್ಲಬ್‌ಗಳಲ್ಲಿ ಎಲ್ಲ ವಿಧದ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ವೆಂಕಟ ರಾಜಾ ಆದೇಶ ಹೊರಡಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next