Advertisement
ಬಿಜೆಪಿಯ ಎಲ್.ಎ. ರವಿಸುಬ್ರಹ್ಮಣ್ಯ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ 69,919 ಅಂಗನವಾಡಿ ಕೇಂದ್ರಗಳಿದ್ದು ಈ ಪೈಕಿ 50 ಸಾವಿರ ಅಂಗನವಾಡಿ ಕೇಂದ್ರಗಳು ಸ್ವಂತ ಕಟ್ಟಡದಲ್ಲಿದ್ದರೆ, 12 ಸಾವಿರ ಅಂಗನವಾಡಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. 2 ಸಾವಿರ ಅಂಗನವಾಡಿಗಳನ್ನು ಶಾಲಾ ಆವರಣಗಳಲ್ಲಿ ನಡೆಸುತ್ತಿದ್ದು, ಇನ್ನುಳಿದ ಅಂಗನವಾಡಿಗಳು ಸಮುದಾಯ ಭವನ, ಯುವಕ ಸಂಘಗಳ ಆವರಣದಲ್ಲಿ ನಡೆಯುತ್ತಿವೆ ಎಂದರು.
Related Articles
Advertisement
ಎಲ್ಲಕ್ಕೂ ಉತ್ತರ ನೀಡಿದ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್, ಮುಂಗಡ ಹಣ ನೀಡಲು ಸರ್ಕಾರದಲ್ಲಿ ಅವಕಾಶವಿಲ್ಲ. ಬೆಂಗಳೂರು ನಗರದ ಅಂಗನವಾಡಿಗಳಿಗೆ ಬಾಡಿಗೆ ಮತ್ತಿತರ ಖರ್ಚು-ವೆಚ್ಚಗಳಿಗೆಂದೇ 5.30 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ಬಾಡಿಗೆ ಮೊತ್ತ ಹೆಚ್ಚಳ ಮಾಡಲು ಹಣಕಾಸು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದು ಅಲ್ಲಿಂದ ಅನುಮೋದನೆ ಸಿಕ್ಕ ಕೂಡಲೇ ಬಿಡುಗಡೆ ಮಾಡುತ್ತೇವೆ. 2023-24ರಲ್ಲಿ 4 ಸಾವಿರ ಹೊಸ ಅಂಗನವಾಡಿಗಳಿಗೆ ಮಂಜೂರಾತಿ ಕೊಟ್ಟಿದ್ದು, 6000 ಕಡೆಗಳಲ್ಲಿ ನಿವೇಶನ ಗುರುತು ಮಾಡಲಾಗಿದೆ. ಈ ಬಾರಿ 1000 ಕಟ್ಟಡಗಳನ್ನು ನಿರ್ಮಿಸಲು ಬಜೆಟ್‌ನಲ್ಲಿ ಅನುದಾನ ಮೀಡಲಿಡಲಾಗಿದೆ ಎಂದು ಮಾಹಿತಿ ನೀಡಿದರು.
“ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನ ಅತ್ಯಂತ ಕಡಿಮೆ ಇದೆ. ಆದರೆ, ಅವರ ಮೇಲೆ ಹೆಚ್ಚು ಕೆಲಸ ಹೇರಲಾಗುತ್ತಿದೆ. ಹೀಗಾಗಿ ಅವರ ಗೌರವ ಧನ ಹೆಚ್ಚಳ ಮಾಡಿ ಇಲ್ಲವೇ ಅವರಿಗೆ ವಹಿಸುವ ಕೆಲಸಗಳನ್ನಾದರೂ ಕಡಿಮೆ ಮಾಡಬೇಕು.” -ಭಾಗೀರಥಿ ಮುರುಳ್ಯ, ಬಿಜೆಪಿ ಶಾಸಕಿ
“ಅಂಗನವಾಡಿ ಕಾರ್ಯಕರ್ತೆಯರ ಗೌರವ ಧನವನ್ನು ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಇದ್ದಾಗ ಹೆಚ್ಚಿಸಿದ್ದರು. ಅದಾದ ನಂತರ ಬಂದ ಸರ್ಕಾರಗಳು ಹೆಚ್ಚಳ ಮಾಡಿಲ್ಲ. ಈ ಬಾರಿ ಕೂಡ ಗೌರವಧನ ಹೆಚ್ಚಿಸುವ ಪ್ರಸ್ತಾವನೆ ಇದೆ. ಸಿಎಂ ಗಮನಕ್ಕೆ ತರಲಾಗಿದೆ. ಶೀಘ್ರವೇ ನಿರ್ಣಯ ಕೈಗೊಳ್ಳಲಾಗುತ್ತೆ.” -ಲಕ್ಷ್ಮೀ ಹೆಬ್ಟಾಳ್ಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಲಿಂಗತ್ವ ಅಲ್ಪಸಂಖ್ಯಾಕರಿಗೂ “ಗೃಹಲಕ್ಷ್ಮೀ’: ಹೆಬ್ಟಾಳ್ಕರ್ ಸೂಚನೆ
ಗೃಹಲಕ್ಷ್ಮೀ ಯೋಜನೆಯ ಲಾಭವನ್ನು ಲಿಂಗತ್ವ ಅಲ್ಪಸಂಖ್ಯಾಕರಿಗೂ ಕೊಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಟಾಳ್ಕರ್ ವಿಧಾನಸಭೆಯಲ್ಲಿ ಭರವಸೆ ನೀಡಿದರು. ಕಾಂಗ್ರೆಸ್‌ನ ನಯನಾ ಮೋಟಮ್ಮ ಪ್ರಶ್ನೆಗೆ ಉತ್ತರ ನೀಡಿದ ಅವರು, ಸರಕಾರ ನೀಡಿರುವ ಗುರುತಿನ ಚೀಟಿ ಹಾಗೂ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಿದರೆ ಲಿಂಗತ್ವ ಅಲ್ಪಸಂಖ್ಯಾಕರಿಗೂ ಈ ತಿಂಗಳಿನಿಂದಲೇ ಹಣ ಬಿಡುಗಡೆ ಮಾಡಲಾಗುತ್ತದೆ ಎಂದರು. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ 20,266 ಮಂದಿ ಲಿಂಗತ್ವ ಅಲ್ಪಸಂಖ್ಯಾಕರಿದ್ದು, 2024ರ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಲಭಿಸಿರುವ ಅಂಕಿ-ಅಂಶಗಳ ಪ್ರಕಾರ 43,752 ಲಿಂಗತ್ವ ಅಲ್ಪಸಂಖ್ಯಾಕರು ರಾಜ್ಯದಲ್ಲಿದ್ದಾರೆ. ಸೂಕ್ತ ದಾಖಲಾತಿ ಜತೆ ಅರ್ಜಿ ಸಲ್ಲಿಸಿದರೆ ಪರಿಗಣಿಸಲಾಗುವುದು ಎಂದರು.