Advertisement

ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ: ಅಶೋಕ್‌

07:40 PM Aug 10, 2021 | Team Udayavani |

ಬೆಂಗಳೂರು: ಕೋವಿಡ್‌ ಮೂರನೇ ಅಲೆ ನಿಯಂತ್ರಣ ಮಾಡಲು ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ತಿಳಿಸಿದ್ದಾರೆ.

Advertisement

ಇನ್ನು ಕೋವಿಡ್‌ ಮೂರನೇ ಅಲೆಯ ನಿಯಂತ್ರಣ ಮಾಡಲು ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸಿದ್ದೇನೆ. ಸಚಿವರುಗಳು ಕೂಡ ಕೋವಿಡ್‌ ನಿಯಮ ಪಾಲಿಸಬೇಕು. ಈಗ ಶ್ರಾವಣ ಮಾಸದಲ್ಲಿ ಸಾಲು ಸಾಲು ಹಬ್ಬಗಳು ಬರುತ್ತಿವೆ. ಅಮೆರಿಕಾದಲ್ಲಿ ಕೊವಿಡ್‌ 3 ನೇ ಅಲೆಯಿಂದ ಆಸ್ಪತ್ರೆಗಳು ತುಂಬಿ ತುಳುಕುತ್ತಿವೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿಯೂ ಅನೇಕ ಕಟ್ಟು ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಮಕ್ಕಳ ಆಸ್ಪತ್ರೆ ತೆರೆಯಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.

ಕೇರಳದಲ್ಲಿ ಕೋವಿಡ್‌ ಪ್ರಕರಣ ಹೆಚ್ಚಾಗಿದೆ. ಅದು ರಾಜ್ಯದಲ್ಲಿ ಕಾಣಿಸದಂತೆ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಖಾಸಗಿ ಆಸ್ಪತ್ರೆಗಳಿಗೆ ತಾತ್ಕಾಲಿಕವಾಗಿ ಬೆಡ್‌ಗಳನ್ನು ವಾಪಸ್‌ ನೀಡಲಾಗಿದೆ. ಅಗತ್ಯ ಬಿದ್ದರೆ ಬೆಡ್‌ಗಳನ್ನು ವಾಪಸ್‌ ಪಡೆಯುತ್ತೇವೆ. ನಮ್ಮ ಆದೇಶದಲ್ಲಿಯೇ ಅದನ್ನು ತಿಳಿಸಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಬಿಜೆಪಿಗೆ 3,623 ಕೋಟಿ ರೂ. ಆದಾಯ! ಚುನಾವಣಾ ಬಾಂಡ್‌ ಮೂಲಕವೇ 2,555 ಕೋಟಿ ರೂ. ಗಳಿಕೆ

ಇನ್ನು ನಾನು ಐದಾರು ದಿನಗಳಲ್ಲಿ ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತೇನೆ. ಬುಧವಾರ ಸಿಎಂ ಮಂಗಳೂರು ಪ್ರವಾಸ ಕೈಗೊಳ್ಳಲಿದ್ದಾರೆ. ಗಡಿ ಜಿಲ್ಲೆಗಳಲ್ಲಿ ಕೋವಿಡ್‌ ನಿಯಂತ್ರಣ ಕುರಿತು ಚರ್ಚೆ ನಡೆಸಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದ್ದಾರೆ. ಸ್ವಾಂತಂತ್ರ್ಯ ದಿನಾಚರಣೆಯನ್ನು ಕೋವಿಡ್‌ ನಿಯಮ ಪಾಲಿಸಿ ಆಚರಿಸಲು ತೀರ್ಮಾನ ಮಾಡಲಾಗಿದೆ ಎಂದು ತಿಳಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next