Advertisement

ಮಕ್ಕಳ ಬೆಳವಣಿಗೆಗೆ ಪೌಷ್ಟಿಕ ಆಹಾರ ಅವಶ್ಯ

05:17 PM Mar 29, 2019 | Team Udayavani |

ಮಾನ್ವಿ: ಅಂಗನವಾಡಿ ಕೇಂದ್ರಗಳಲ್ಲಿ ಅಕ್ಷರಾಭ್ಯಾಸದ ಜೊತೆಗೆ ನೀಡಲಾಗುವ ಪೌಷ್ಟಿಕ ಆಹಾರ ಮಕ್ಕಳ ಬೌದ್ದಿಕ, ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಎಂ.ವಿಜಯಲಕ್ಷ್ಮೀ ಹೇಳಿದರು.

Advertisement

ಹೈಕ ಪ್ರದೇಶಾಭಿವೃದ್ಧಿ ಮಂಡಳಿ ಮತ್ತು ಜಿಲ್ಲಾಡಳಿತ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆ, ಕಲಿಕೆ ಟಾಟಾ ಟ್ರಸ್ಟ್‌ ಸಂಯುಕ್ತಾಶ್ರಯದಲ್ಲಿ ಮ್ಯಾಕ್ರೋ ಯೋಜನೆಯಡಿ ಪಟ್ಟಣದ ಪುರಸಭೆ ಸಭಾಂಗಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗಾಗಿ ಹಮ್ಮಿಕೊಂಡ ಶಾಲಾ ಪೂರ್ವ ಶಿಕ್ಷಣ ಬಲವರ್ಧನೆ ಕುರಿತ ನಾಲ್ಕು ದಿನಗಳ ತರಬೇತಿ ಕಾರ್ಯಾಗಾರಕ್ಕೆ ಬುಧವಾರ ಚಾಲನೆ ನೀಡಿ ಅವರು ಮಾತನಾಡಿದರು.

ಅಂಗನವಾಡಿ ಕೇಂದ್ರದಲ್ಲಿ ಸೇರ್ಪಡೆಯಾಗುವ ಮಗುವಿಗೆ ಉತ್ತಮ ಗುಣಮಟ್ಟದ ಕಲಿಕೆ ಹೇಳಿಕೊಡಬೇಕು. ಜೊತೆಗೆ ಭಾವನಾತ್ಮಕ ಚಿಂತನೆಗಳನ್ನು ಹಾಗೂ ಆಟೋಟಗಳ ತಯಾರಿ ಬಗ್ಗೆ ಅರಿವು ಮೂಡಿಸುವ ಪ್ರಯತ್ನಕ್ಕೆ ಕಾರ್ಯಕರ್ತೆಯರು ಮುಂದಾಗಬೇಕು ಎಂದರು.

ಅಧಿಕಾರಿ ಎಸ್‌. ಶಶಿಕಾಂತ ಮಾತನಾಡಿ, ಮಕ್ಕಳ ಬೆಳವಣಿಗೆಗೆ ಹಾಗೂ ಕಲಿಕೆಗೆ ಮೂಲ ಬೇರು ಅಂಗನವಾಡಿ ಕೇಂದ್ರಗಳಾಗಿವೆ. ಈ ಕೇಂದ್ರಗಳ ಕಾರ್ಯಕರ್ತೆಯರು, ಸಹಾಯಕಿಯರು ಶಾಲಾ ಪೂರ್ವ ಶಿಕ್ಷಣದ ಮಹತ್ವವನ್ನು ಅರಿತು ಕರ್ತವ್ಯ ನಿರ್ವಹಿಸಬೇಕೆಂದು ಹೇಳಿದರು.

ಮಹಿಳಾ ಮತ್ತು ಕಲ್ಯಾಣ ಇಲಾಖೆ ಅಧಿಕಾರಿ ಸುಭದ್ರಾದೇವಿ, ಎಐಟಿಯುಸಿ ಗೌರವಾಧ್ಯಕ್ಷ ಸಿದ್ದರಾಮಯ್ಯಸ್ವಾಮಿ ಮಾತನಾಡಿದರು. ಎಸಿಡಿಪಿಒ ಮಹೇಶ ಪ್ರಾಸ್ತಾವಿಕ ಮಾತನಾಡಿದರು. ತಾಪಂ ಕಾರ್ಯ ನಿರ್ವಹಣಾಧಿಕಾರಿ ಶಶಿಕಾಂತ ಶಿವಪುರೆ ಅಧ್ಯಕ್ಷತೆ ವಹಿಸಿದ್ದರು.

Advertisement

ಸಿಡಿಪಿಒ ಇಲಾಖೆ ಅಧಿಕಾರಿಗಳು, ಮೇಲ್ವಿಚಾರಕರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸಹಾಯಕಿಯರು ಭಾಗವಹಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next