Advertisement

ಚಿಲುಮೆ ಅವ್ಯವಹಾರ, ಬಿಬಿಎಂಪಿ ಅಧಿಕಾರಿಗಳಿಗೆ ನಡುಕ

12:03 PM Nov 26, 2022 | keerthan |

ಬೆಂಗಳೂರು: ಮತದಾರರ ಮಾಹಿತಿ ಕಳವು ಪ್ರಕರಣದಲ್ಲಿ ಕೇಂದ್ರ ಚುನಾವಣಾ ಆಯೋಗ ಇಬ್ಬರು ಐಎಎಸ್ ಅಧಿಕಾರಿಗಳನ್ನು ಅಮಾನತುಗೊಳಿಸಿ ವಿಚಾರಣೆಗೆ ಆದೇಶಿಸಿರುವುದು ಬಿಬಿಎಂಪಿಯ ಹಲವು ಅಧಿಕಾರಿಗಳಿಗೆ ಆತಂಕ ಸೃಷ್ಟಿಸಿದೆ.

Advertisement

ಚಿಲುಮೆ ಸಂಸ್ಥೆಯ ಜತೆಗೆ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಕಾರಣಕ್ಕೆ ಬಿಬಿಎಂಪಿ ವಿಶೇಷ ಆಯುಕ್ತ ಎಸ್.ರಂಗಪ್ಪ, ಬೆಂಗಳೂರು ನಗರ‌‌ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರನ್ನು ಕೇಂದ್ರ ಚುನಾವಣಾ ಆಯೋಗ ಅಮಾನತುಗೊಳಿಸಿದೆ. ಇವರಿಬ್ಬರ ವಿಚಾರಣೆ ನಡೆಸುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿಗಳಿಗೆ ಆಯೋಗ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.

ಈ ಪ್ರಕರಣ ಆಯೋಗದ ನಿಲುವನ್ನು ಸಾರ್ವಜನಿಕವಾಗಿ ಪ್ರಶ್ನೆ ಮಾಡುವಂತೆ ಮಾಡಿತ್ತು. ಹೀಗಾಗಿ ಆಯೋಗ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ. ಘಟನೆಗೆ ಸಂಬಂಧಪಟ್ಟಂತೆ ಕಾಂಗ್ರೆಸ್ ಕೇಂದ್ರ ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕವಂತೂ ಪ್ರಕರಣ ತೀವ್ರತೆ ಪಡೆದುಕೊಂಡಿದೆ.

ಇದನ್ನೂ ಓದಿ:ಮಹಿಳೆಯರಿರುವ ಸಂಸ್ಥೆಯಲ್ಲಿ ಹೆಚ್ಚು ಸಂಸ್ಕಾರ, ಸಂಸ್ಕೃತಿ ಇರುತ್ತದೆ: ಚಂದ್ರಹಾಸ್‌ ಶೆಟ್ಟಿ

ಒಂದು ಮೂಲಗಳ ಪ್ರಕಾರ ಬಿಬಿಎಂಪಿಯ ಹಿರಿಯ ಹಾಗೂ ಪ್ರಭಾವಿ ಅಧಿಕಾರಿಯ ತಲೆದಂಡವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next