ನವದೆಹಲಿ:1962ರಿಂದಲೇ ಚೀನಾ ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಅಕ್ರಮವಾಗಿ ವಶಪಡಿಸಿಕೊಂಡ ಜಾಗದಲ್ಲಿ ಸೇತುವೆ ನಿರ್ಮಾಣ ಕಾರ್ಯವನ್ನು ಮುಂದುವರಿಸಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ವಿ.ಮುರಳೀಧರನ್ ಲೋಕಸಭೆಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಹಿಂದೂ-ಮುಸ್ಲಿಂ ಭಾವೈಕ್ಯತೆಯ ಕೊಂಡಿ, ಕನ್ನಡದ ಕಬೀರ ಇಬ್ರಾಹಿಂ ಸುತಾರ
ಶುಕ್ರವಾರ(ಫೆ.04) ಲೋಕಸಭಾ ಬಜೆಟ್ ಕಲಾಪದಲ್ಲಿ ಮಾತನಾಡಿದ ಅವರು, ಚೀನಾದ ಅಕ್ರಮ ಭೂಕಬಳಿಕೆಯನ್ನು ಯಾವತ್ತೂ ಭಾರತ ಒಪ್ಪಿಕೊಳ್ಳುವುದಿಲ್ಲ ಎಂದು ಹೇಳಿದರು. ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಚೀನಾ ನೂತನವಾಗಿ ನಿರ್ಮಿಸುತ್ತಿರುವ ಸೇತುವೆ ಕುರಿತು ಕೇಳಿದ ಪ್ರಶ್ನೆಗೆ ಈ ಪ್ರತಿಕ್ರಿಯೆ ನೀಡಿದ್ದಾರೆ.
ಪ್ಯಾಂಗಾಂಗ್ ಸರೋವರ ಪ್ರದೇಶದಲ್ಲಿ ಚೀನಾ ಸೇತುವೆ ನಿರ್ಮಾಣ ಮಾಡುತ್ತಿರುವುದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. 1962ರಿಂದಲೇ ಚೀನಾ ಅಕ್ರಮವಾಗಿ ಈ ಭೂಪ್ರದೇಶವನ್ನು ವಶಪಡಿಸಿಕೊಂಡಿದ್ದು, ಅಲ್ಲಿ ಸೇತುವೆ ನಿರ್ಮಿಸುವುದನ್ನು ಮುಂದುವರಿಸಿದೆ ಎಂದು ಮಾಹಿತಿ ನೀಡಿದ್ದಾರೆ.
ಕೇಂದ್ರಾಡಳಿತ ಪ್ರದೇಶವಾದ ಜಮ್ಮುಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗವಾಗಿದೆ. ಭಾರತದ ಸಾರ್ವಭೌಮತ್ವವನ್ನು ಇತರ ದೇಶಗಳು ಗೌರವಿಸುತ್ತದೆ ಎಂಬುದನ್ನು ಭಾರತ ನಿರೀಕ್ಷಿಸುತ್ತದೆ ಎಂದು ಹೇಳಿದರು.