ಬೀಜಿಂಗ್: ಚೀನಾದಲ್ಲಿ ಕೋವಿಡ್ ಆರ್ಭಟ ಮತ್ತೆ ಶುರುವಾಗಿದ್ದು, ಇದನ್ನು ಬೇಗನೇ ನಿಯಂತ್ರಿಸದಿದ್ದರೆ, ಸದ್ಯದಲ್ಲೇ ದಿನಕ್ಕೆ 6.30 ಲಕ್ಷ ಕೊರೊನಾ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಪರ್ಕಿಂಗ್ ವಿಶ್ವವಿದ್ಯಾಲಯದ ತಜ್ಞರು ಸರ್ಕಾರವನ್ನು ಎಚ್ಚರಿಸಿದ್ದಾರೆ.
ಬೀಜಿಂಗ್ ಹಾಗೂ ಸುತ್ತಲಿನ ಪ್ರಾಂತ್ಯಗಳಲ್ಲಿ ಈಗಾಗಲೇ ಕೊರೊನಾ ಪ್ರಕರಣ ಗಣನೀಯವಾಗಿ ಹೆಚ್ಚುತ್ತಿವೆ.
ಪರಿಸ್ಥಿತಿಯನ್ನು ಬೇಗನೇ ಹತೋಟಿಗೆ ತೆಗೆದುಕೊಳ್ಳದಿದ್ದಲ್ಲಿ, ಮುಂದೆ ಭಾರೀ ತೊಂದರೆ ಅನುಭವಿಸಬೇಕಾಗುತ್ತದೆ. ಜೊತೆಗೆ, ದೇಶದ ವೈದ್ಯಕೀಯ ವ್ಯವಸ್ಥೆಯನ್ನೇ ಅಲ್ಲೋಲ ಕಲ್ಲೋಲ ಮಾಡುವಂಥ ಸಂದರ್ಭ ಒದಗಬಹುದು ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ವೈನ್ ಆರ್ಡರ್ ಮಾಡಿದ ನಟಿ ಖಾತೆಯಿಂದ 3 ಲಕ್ಷ ಕದ್ದ ಖದೀಮರು
ಹಾಗಾಗಿ, ಚೀನಾವು ಈ ಹಿಂದೆ ತನ್ನಲ್ಲಿ ಜಾರಿಗೊಳಿಸಿದ್ದ, ಸಾರ್ವಜನಿಕರಿಂದ ತೀವ್ರ ಆಕ್ಷೇಪಕ್ಕೆ ಗುರಿಯಾಗಿದ್ದ “ಝೀರೋ ಕೋವಿಡ್’ ನಿಯಮಗಳನ್ನು ಮತ್ತೊಮ್ಮೆ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಿದೆ.