ಬೀಜಿಂಗ್ : ನೈಋತ್ಯ ಚೀನಾದಲ್ಲಿ ಸೋಮವಾರ ಸಂಭವಿಸಿದ ಪ್ರಬಲ ಭೂಕಂಪದಲ್ಲಿ ಸಾವನ್ನಪ್ಪಿದವರ ಸಂಖ್ಯೆ 46 ಕ್ಕೆ ಏರಿಕೆಯಾಗಿದ್ದು, ಹಲವರು ಗಾಯಗೊಂಡಿದ್ದಾರೆ ಈಗಾಗಲೇ ಕೋವಿಡ್ ಸಾಂಕ್ರಾಮಿಕದಿಂದ ತತ್ತರಿಸಿದ್ದ ಚೀನಾಕ್ಕೆ ಮತ್ತೊಂದು ಸಂಕಷ್ಟ ಎದುರಾದಂತಾಗಿದೆ.
ಸ್ಥಳೀಯ ಕಾಲಮಾನದ ಪ್ರಕಾರ ಮಧ್ಯಾಹ್ನ 12:25 ಕ್ಕೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.8ರಷ್ಟು ತೀವ್ರತೆ ದಾಖಲಾಗಿದೆ. ಸಿಚುವಾನ್ ರಾಜಧಾನಿ ಚೆಂಗ್ಡುವಿನಿಂದ 180 ಕಿಲೋ ಮೀಟರ್ ದೂರದಲ್ಲಿ ಭೂಕಂಪ ಸಂಭವಿಸಿರುವುದಾಗಿ ವರದಿ ತಿಳಿಸಿದೆ.
ಘಟನೆಯಲ್ಲಿ ಕನಿಷ್ಠ 46 ಜನರು ಸಾವನ್ನಪ್ಪಿದ್ದು ಮತ್ತು 50 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕೃತ ಮಾಧ್ಯಮ ವರದಿಗಳು ತಿಳಿಸಿವೆ.
ಘಟನಾ ಸ್ಥಳಗಳಲ್ಲಿ ರಕ್ಷಣಾ ತಂಡಗಳು ಬೀಡುಬಿಟ್ಟಿದ್ದು ರಕ್ಷಣಾ ಕಾರ್ಯ ಪ್ರಗತಿಯಲ್ಲಿದೆ ಅಲ್ಲದೆ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ .
ಭೂಕಂಪನದಿಂದಾಗಿ ಕೆಲವು ರಸ್ತೆಗಳು ಮತ್ತು ಮನೆಗಳು ಹಾನಿಗೊಂಡಿದ್ದು, ಕೆಲವು ಪ್ರದೇಶದಲ್ಲಿ ದೂರವಾಣಿ, ಮೊಬೈಲ್ ಸಂಪರ್ಕ ಕಡಿತಗೊಂಡಿರುವುದಾಗಿ ವರದಿ ಹೇಳಿದೆ. ಸಿಚುವಾನ್ ನಗರದಲ್ಲಿ ಸುಮಾರು 21 ಮಿಲಿಯನ್ ಜನರು ವಾಸವಾಗಿದ್ದಾರೆ.
ಸಿಚುವಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಲ್ಲಿ ಮಡಿದವರಿಗೆ ಭಾರತೀಯ ರಾಯಭಾರ ಕಚೇರಿ ಸಂತಾಪ ಸೂಚಿಸಿದೆ ಅಲ್ಲದೆ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಟ್ವೀಟ್ ಮಾಡಿದೆ.
ಇದನ್ನೂ ಓದಿ : ಕನ್ಯತ್ವ ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ಅತ್ಯಾಚಾರ ಸಂತ್ರಸ್ತೆಗೆ ಚಿತ್ರಹಿಂಸೆ!