ಚೀನಾ: ಉತ್ತರ ಚೀನಾದ ಮಂಗೋಲಿಯಾ ಸ್ವಾಯತ್ತ ಪ್ರದೇಶದ ಅಲ್ಕ್ಸಾ ಲೀಗ್‌ನಲ್ಲಿ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 50 ಕ್ಕೂ ಹೆಚ್ಚು ಜನರು ಸಿಲುಕಿರುವ ಘಟನೆ ವರದಿಯಾಗಿದೆ.
ಬುಧವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ 50ಕ್ಕೂ ಹೆಚ್ಚು ಮಂದಿ ಗಣಿಯಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಚೀನಾ ಸುದ್ದಿ ಸಂಸ್ಥೆ ಕ್ಸಿನ್ಹುವಾ ವರದಿ ಮಾಡಿದೆ.
ಇದರೊಂದಿಗೆ ಗಣಿ ಕುಸಿತದಿಂದಾಗಿ ಹಲವು ವಾಹನಗಳು ಅವಶೇಷಗಳಡಿಯಲ್ಲಿ ಹೂತು ಹೋಗಿವೆ ಎಂದು ಹೇಳಲಾಗುತ್ತಿದೆ. ಚೀನಾದ ಒಳ ಮಂಗೋಲಿಯಾ ಪ್ರದೇಶದಲ್ಲಿ ಕಲ್ಲಿದ್ದಲು ಮತ್ತು ಇತರ ಖನಿಜಗಳ ಗಣಿಗಳಿವೆ.
ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು ಗಣಿಯಡಿ ಸಿಲುಕಿದ್ದ ಮೂವರನ್ನು ಹೊರಕ್ಕೆ ತೆಗೆಯಲಾಗಿದ್ದು ಅದರಲ್ಲಿ ಇಬ್ಬರು ಅಸುನೀಗಿರುವುದು ದೃಢಪಟ್ಟಿದೆ, ರಕ್ಷಣಾ ತಂಡ ಕಾರ್ಯಾಚರಣೆ ಮುಂದುವರೆಸಿದೆ.
ಇದನ್ನೂ ಓದಿ: ಶ್ರೀಲಂಕಾದಲ್ಲಿ ಭಾರತೀಯ ಹೈಕಮಿಷನ್ ಗೆ ನುಗ್ಗಿದ ಮಹಿಳೆ ಸೇರಿ ಐವರ ಬಂಧನ