Advertisement

ಚೀನಕ್ಕೆ ನೈಸರ್ಗಿಕ ಶಾಪ! ಭಾರೀ ಮಳೆ ಪ್ರವಾಹಕ್ಕೆ ಲಕ್ಷಾಂತರ ಮಂದಿ ಸ್ಥಳಾಂತರ, 200 ಸಾವು

10:50 PM Jul 14, 2020 | Nagendra Trasi |

ಬೀಜಿಂಗ್: ಸದಾ ಗಡಿ ವಿವಾದದಲ್ಲಿಯೇ ಮುಳುಗಿರುವ ಚೀನ ಇದೀಗ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಸಂಭವಿಸಿದ ಭಾರಿ ಪ್ರವಾಹದಿಂದ ತತ್ತರಿಸಿ ಹೋಗಿದೆ. ಚೀನಾದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿರುವುದು ದೊಡ್ಡ ಸವಾಲಾಗಿ ಪರಿಣಮಿಸಿದ್ದು, ಲಕ್ಷಾಂತರ ಮಂದಿಯನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಪ್ರವಾಹದಿಂದಾಗಿ ಸುಮಾರು 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 38 ಲಕ್ಷಕ್ಕೂ ಅಧಿಕ ಜನರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ ಎಂದು ವರದಿ ವಿವರಿಸಿದೆ. ದೇಶದಲ್ಲಿನ 433 ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಪ್ರವಾಹದಿಂದ ಜನಜೀವನ ಅಸ್ತವ್ಯಸ್ತಗೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಚೀನದ ಅತಿ ದೊಡ್ಡ ನದಿಗಳಲ್ಲಿ ಒಂದಾದ ಪೊಯಾಂಗ್ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿತ್ತು. ಕಿಯಾಂಟಂಗ್ ನದಿ ಸುತ್ತಮುತ್ತಲೂ ತುರ್ತುಪರಿಸ್ಥಿತಿ ಘೋಷಿಸಲಾಗಿತ್ತು. ಜುಲೈ ತಿಂಗಳಿನಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜನರು ಪರದಾಡುವಂತಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಕ್ಲಿಪ್ಪಿಂಗ್ ಗಳಲ್ಲಿ, ತುಂಬಿ ಹರಿಯುತ್ತಿರುವ ನದಿಗಳಿಂದಾಗಿ ತಗ್ಗುಪ್ರದೇಶಗಳಲ್ಲಿನ ಮನೆಗಳು ಸಂಪೂರ್ಣ ಜಲಾವೃತಗೊಂಡಿದೆ. ಅಷ್ಟೇ
ಅಲ್ಲ ಮೂರು ಅಂತಸ್ತಿನ ಕಟ್ಟಡವೊಂದು ಜಿಯಾಂಕ್ಸಿಯಲ್ಲಿ ಕುಸಿದು ಬಿದ್ದಿರುವುದಾಗಿ ವರದಿ ತಿಳಿಸಿದೆ.

ಭಾರೀ ಮಳೆ, ಪ್ರವಾಹದಿಂದಾಗಿ ಚೀನದ 13 ಪ್ರಾಂತ್ಯಗಳಲ್ಲಿ ಸಂಭವಿಸಿದ ಆರ್ಥಿಕ ನಷ್ಟ ಅಂದಾಜು 25.7 ಬಿಲಿಯನ್ ಗೆ (3.6 ಬಿಲಿಯನ್ ಡಾಲರ್) ತಲುಪಿರುವುದಾಗಿ ವರದಿ ತಿಳಿಸಿದೆ. ಪ್ರವಾಹ ಪರಿಸ್ಥಿತಿ ಇದೇ ರೀತಿ ಮುಂದುವರಿದಲ್ಲಿ ಚೀನ ಹೂಡಿಕೆಯಲ್ಲಿಯೂ ಇಳಿಕೆಯಾಗಲಿದೆ ಎಂದು ವರದಿ ಎಚ್ಚರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next