ಚೀನ ವಿದೇಶಾಂಗ ಸಚಿವ ವಾಂಗ್ ಇ ಪಾಕ್ ಭೇಟಿ ವೇಳೆ ಈ ಕುರಿತು ನಿರ್ಧರಿಸಲಾಗಿದೆ. ಪಾಕಿಸ್ಥಾನದಲ್ಲಿ ಇಮ್ರಾನ್ ಖಾನ್ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಚೀನದ ಉನ್ನತಮಟ್ಟದ ನಿಯೋಗ ಭೇಟಿ ನೀಡಿ ವಿವಿಧ ವಿಚಾರಗಳ ಕುರಿತು ಚರ್ಚಿಸಿದೆ. ಎರಡೂ ದೇಶಗಳ ನಡುವೆ ಎಲ್ಲಾ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರ ವೃದ್ಧಿಸಿಕೊಳ್ಳಲೂ ನಿರ್ಧರಿಸಲಾಗಿದೆ ಎಂದು ಚೀನ ಹೇಳಿದೆ.
Advertisement
ಸಿಪಿಇಸಿ ಯೋಜನೆ ಪೂರ್ಣಗೊಳಿಸುವುದಕ್ಕೆ ಸರಕಾರ ಬದ್ಧವಾಗಿದೆ. ಚೀನ ಜತೆಗಿನ ಬಾಂಧವ್ಯ ದೇಶದ ವಿದೇಶಾಂಗ ನೀತಿಯ ಪ್ರಧಾನ ಅಂಶ ಎಂದು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿದ್ದಾರೆ.