Advertisement

ಚೀನಾ ಉತ್ಪನ್ನ: ಎಚ್ಡಿಕೆ ಟಾಂಗ್‌

07:37 AM Jun 20, 2020 | Lakshmi GovindaRaj |

ಬೆಂಗಳೂರು: ಗಡಿಯಲ್ಲಿ ಅಮಾಯಕರ ಬಲಿದಾನದ ನಂತರ ಕೆಲವರಿಗೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸುವ ಬಗ್ಗೆ ಜ್ಞಾನೋದಯವಾಗಿದೆ. ಆದರೆ, ನನ್ನ ಅಧಿಕಾರದ ಅವಧಿಯಲ್ಲಿ ಈ ಬಗ್ಗೆ ಗಂಭೀರವಾಗಿ ಯೋಚಿಸಲಾಗಿತ್ತು.  ಚೀನಾ ವಸ್ತುಗಳನ್ನು ಬಹಿಷ್ಕರಿಸುವುದು ಘೋಷವಾಕ್ಯದಷ್ಟು ಸುಲಭವಲ್ಲ ಎಂದು ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Advertisement

ಈ ಕುರಿತು ಟ್ವೀಟ್‌ ಮಾಡಿ, ಕಾಂಪೀಟ್‌ ವಿತ್‌ ಚೈನಾ ಯೋಜನೆ ಜಾರಿಗೆ ತರಲು ನನ್ನ ನೇತೃತ್ವದ  ಮೈತ್ರಿ ಸರ್ಕಾರದ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಇದಕ್ಕಾಗಿ 9 ಜಿಲ್ಲೆಗಳಲ್ಲಿ ಕ್ಲಸ್ಟರ್‌ ಸ್ಥಾಪಿಸಲಾಗಿತ್ತು. ಸ್ಥಳೀಯರಿಗೆ ಉದ್ಯೋಗ, ಚೀನಾಕ್ಕೆ ಸಿಕ್ಕಿರುವ ಮಾರುಕಟ್ಟೆ ಕಸಿದು ನಮ್ಮವರಿಗೆ ಕೊಡುವುದು, ಆ ಮೂಲಕ ಚೀನಾ ಉತ್ಪನ್ನಗಳನ್ನು  ಹೊರ ಹಾಕುವುದು ನನ್ನ ಉದ್ದೇಶವಾಗಿತ್ತು.

ಆದರೆ, ಆ ಯೋಜನೆಯನ್ನು ಈಗಿನ ಸರ್ಕಾರ ಮುಂದುವರಿಸಿದೆಯೋ, ಇಲ್ಲವೋ ತಿಳಿಯದು ಎಂದು ಹೇಳಿದ್ದಾರೆ. ಕೋವಿಡ್‌ 19 ಸಂಕಷ್ಟದ ಸಮಯದಲ್ಲಿ ಸಂಕಷ್ಟದಲ್ಲಿರುವವರ ರಕ್ಷಣೆಗೆ  ಮುಖ್ಯಮಂತ್ರಿ ಮುಂದಾಗಬೇಕು. ಅವರು ಗಮನಹರಿಸುತ್ತಾರೆ ಎಂಬ ನಂಬಿಕೆ ನನ್ನದು ಎಂದು ಎಚ್ಡಿಕೆ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next