Advertisement

ನೈರುತ್ಯ ಚೀನಾದಲ್ಲಿ ಪ್ರಬಲ ಭೂಕಂಪ ;12 ಬಲಿ,ಹಲವರಿಗೆ ಗಾಯ 

09:59 AM Aug 09, 2017 | Team Udayavani |

ಶಾಂಘೈ: ನೈರುತ್ಯ ಚೀನಾದ ಸಿಚುವಾನ್‌ ಪ್ರಾಂತ್ಯದಲ್ಲಿ  ಮಂಗಳವಾರ ಸಂಜೆ ಪ್ರಬಲ ಭೂಕಂಪ ಸಂಭವಿಸಿದ್ದು 12 ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, 160ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Advertisement

ಸಿಚುವಾನ್‌ನ ಪ್ರವಾಸಿ ಸ್ಥಳದಲ್ಲಿ ಭೂಕಂಪ ಸಂಭವಿಸಿದ್ದು ಅಪಾರ ಹಾನಿಯಾಗಿದೆ. ಸಂಕಷ್ಟಕ್ಕೆ ಸಿಲುಕಿದ 30 ಸಾವಿರಕ್ಕೂ ಹೆಚ್ಚು ಪ್ರವಾಸಿಗರನ್ನು ರಕ್ಷಿಸಲಾಗಿದೆ. 

ರಿಕ್ಟರ್‌ ಮಾಪಕದಲ್ಲಿ 6.5 ತೀವ್ರತೆ ಕಂಡು ದಾಖಲಾಗಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಸಾವಿನ ಸಂಖ್ಯೆ 100 ತಲುಪಬಹುದು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next