Advertisement
ರಾಜ್ಯ ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಕೋರ್ ಕಮಿಟಿ ಸಭೆಯಲ್ಲಿ ಚಿಂಚೋಳಿ ಕ್ಷೇತ್ರಕ್ಕೆ ಬಿಜೆಪಿಯಿಂದ ರಾಮಚಂದ್ರ ಜಾಧವ್ ಹೆಸರು ಅಂತಿಮಗೊಳಿಸಿ ಒಂದೇ ಹೆಸರನ್ನು ಕೇಂದ್ರ ಚುನಾವಣಾ ಸಮಿತಿಗೆ ಶಿಫಾರಸು ಮಾಡಿತ್ತು. ಆದರೆ ಉಮೇಶ್ ಜಾಧವ್ ಅವರು ಕುಟುಂಬದವರೊಂದಿಗೆ ಚರ್ಚಿಸಿ ಬಳಿಕ ತನ್ನ ಪುತ್ರ ಡಾ| ಅವಿನಾಶ್ ಜಾಧವ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದರು.
ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ ಮಾಜಿ ಸಚಿವ ಸುನೀಲ್ ವಲ್ಯಾಪುರೆ ಅವರು ತಮಗೂ ಅವಕಾಶ ನೀಡುವಂತೆ ಮನವಿ ಮಾಡಿ ದರು. ಆದರೆ ಅವರಿಗೆ ಸಮಧಾನಕಾರ ಭರವಸೆ ಸಿಕ್ಕಿಲ್ಲ. ಶನಿವಾರ ಕ್ಷೇತ್ರದ ಬೆಂಬಲಿಗರು, ಕಾರ್ಯಕರ್ತರ ಸಭೆ ಕರೆಯಲಾಗಿದೆ. ಆ ಸಭೆಯ ನಿರ್ಧಾರದಂತೆ ಮುಂದುವರಿಯುವೆ ಎಂದು ಸುನಿಲ್ ತಿಳಿಸಿದರು.
Related Articles
Advertisement
ಶನಿವಾರ ವೇಣು ಆಗಮನಕಾಂಗ್ರೆಸ್ ಇನ್ನೂ ಚರ್ಚೆಯ ಹಂತದಲ್ಲೇ ಇದೆ. ಶನಿವಾರ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಬೆಂಗಳೂರಿಗೆ ಬರಲಿದ್ದು, ಅನಂತರವಷ್ಟೇ ಅಭ್ಯರ್ಥಿಗಳ ಹೆಸರು ಅಂತಿಮಗೊಳ್ಳಲಿದೆ ಎಂದು ಹೇಳಲಾಗುತ್ತಿದೆ. ಗುರುವಾರ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಎರಡೂ ಕ್ಷೇತ್ರಗಳ ಮುಖಂಡರ ಜತೆ ಚರ್ಚಿಸಿ ಆಕಾಂಕ್ಷಿಗಳ ಪಟ್ಟಿ ಸಿದ್ಧಪಡಿಸಿಟ್ಟುಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಜೆಡಿಎಸ್ ರಣತಂತ್ರ
ಎರಡೂ ಕ್ಷೇತ್ರಗಳಲ್ಲಿ ಅಭ್ಯರ್ಥಿ ಕಣ ಕ್ಕಿಳಿಸದೆ ಕಾಂಗ್ರೆಸ್‌ಗೆ ಬೆಂಬಲ ನೀಡಲು ಜೆಡಿಎಸ್ ತೀರ್ಮಾನಿಸಿದೆ. ಹೀಗಾಗಿ ಜೆಡಿಎಸ್ ನಾಯಕರು ಉಪ ಚುನಾವಣೆ ಯನ್ನು ಗಂಭೀರವಾಗಿಯೇ ಪರಿಗಣಿಸಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಎಲ್ಲ ರೀತಿಯ ಬೆಂಬಲ-ನೆರವು-ಸಹಕಾರ ನೀಡಲು ಜಿಲ್ಲಾ ಘಟಕಗಳಿಗೆ ಸೂಚನೆ ನೀಡಿದ್ದಾರೆ.