ಚಿಂಚೋಳಿ (ಕಲಬುರಗಿ)
: ಜಿಲ್ಲೆಯ ಚಿಂಚೋಳಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ಹಿಜಾಬ್ ಧರಿಸಿಕೊಂಡೇ ಕಾಲೇಜಿಗೆ ಪ್ರವೇಶ ಪಡೆದುಕೊಂಡಿದ್ದಾರೆ.
ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆಯಾಗದಂತೆ ಚಿಂಚೋಳಿ ಪೊಲೀಸ್ ಠಾಣೆಯ ಪೊಲೀಸರು ಬಿಗಿ ಬಂದೋಬಸ್ತ್ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: ಕೋರ್ಟ್ ತೀರ್ಪು ಬರುವರೆಗೂ ಕಾಯುತ್ತೇವೆ: ಉಡುಪಿಯಲ್ಲಿ ಹಿಜಾಬ್ ಧರಿಸಿದ ವಿದ್ಯಾರ್ಥಿನಿಯರು
ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಕೊಂಡು ಬಂದಿದ್ದಾರೆ. ಕಾಲೇಜಿನ ಕೆಲ ವಿದ್ಯಾರ್ಥಿಗಳು ನಾವು ಕೇಸರಿ ಶಾಲು ಧರಿಸಿಕೊಂಡು ಬರುತ್ತೆವೆಯೆಂದು ಕಾಲೇಜಿನ ಉಪನ್ಯಾಸಕ ರೊಂದಿಗೆ ವಾಗ್ವಾದ ನಡೆಸಿದರು.
ಚಿಂಚೋಳಿತಹಸೀಲ್ದಾರ್ ಅಂಜುಮ್ ತಬಸ್ಸುಮ್ ಪಿಎಸ್ ಐ ಮಂಜುನಾಥ್ ರೆಡ್ಡಿ ಕಾಲೇಜಿಗೆ ಭೇಟಿ ನೀಡಿ ಪರಿಶೀಲಿಸಿದರು.