Advertisement

ಬಿರುಸಿನ ಮತದಾನ ; ಚಿಂಚೋಳಿಯಲ್ಲಿ ಕೈ -ಬಿಜೆಪಿ ಕಾರ್ಯಕರ್ತರ ಘರ್ಷಣೆ

09:42 AM May 20, 2019 | Team Udayavani |

ಹುಬ್ಬಳ್ಳಿ/ಕಲಬುರಗಿ : ಕುಂದಗೋಳ ಮತ್ತು ಚಿಂಚೋಳಿಯಲ್ಲಿ ವಿಧನಸಭಾ ಕ್ಷೇತ್ರಗಳಿಗೆ ಭಾನುವಾರ ಉಪಚುನಾವಣಾ ಮತದಾನ ಬಿರುಸಿನಿಂದ  ನಡೆಯುತ್ತಿದೆ.

Advertisement

ಚಿಂಚೋಳಿಯ ಕೊಡ್ಲಿಗಿಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದ್ದು, ಪೊಲೀಸರು ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಚಿಂಚೋಳಿಯಲ್ಲಿ 11 ಗಂಟೆ ವೇಳೆಗೆ ಶೇಕಡಾ 23.12 ರಷ್ಟು ಮತದಾನ ನಡೆದಿರುವ ಬಗ್ಗೆ ವರದಿಯಾಗಿದೆ.

ಕುಂದಗೋಳದ ಅದರಗುಂಚಿ ಬೂತ್‌ನಲ್ಲಿ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡರ್‌ ಅವರು ಕುಟುಂಬ ಸಮೇತ ಆಗಮಿಸಿ ಹಕ್ಕು ಚಲಾಯಿಸಿದ್ದಾರೆ.

ಚಿಂಚೋಳಿಯ ಬೆಡಸೂರದಲ್ಲಿ ಡಾ.ಉಮೇಶ್‌ ಜಾಧವ್‌, ಬಿಜೆಪಿ ಅಭ್ಯರ್ಥಿ ಡಾ.ಅವಿನಾಶ್‌ ಜಾಧವ್‌ ಮತ್ತು ಕುಟುಂಬ ಸದಸ್ಯರು ಹಕ್ಕು ಚಲಾಯಿಸಿದ್ದಾರೆ.

Advertisement

ಮತದಾನಕ್ಕೂ ಮುನ್ನ ಅವಿನಾಶ್‌ ಜಾಧವ್‌ ಪತ್ನಿಯೊಂದಿಗೆ ರೇವಣಸಿದ್ದೇಶ್ವರ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಚಿಂಚೋಳಿಯ ಮತಗಟ್ಟೆಯೊಂದರಲ್ಲಿ ಇವಿಎಂನಲ್ಲಿ ತಾಂತ್ರಿಕ ದೋಷ ಕಂಡು ಬಂದ ಬಗ್ಗೆ ವರದಿಯಾಗಿದೆ.

ಚಿಂಚೋಳಿ ಕಾಂಗ್ರೆಸ್ ಅಭ್ಯರ್ಥಿ ಸುಭಾಷ ರಾಠೋಡ್‌ ಅವರು ಸೇರಿ ತಾಂಡಾದಲ್ಲಿ ತಮ್ಮ ಹಕ್ಕು ಚಲಾಯಿಸಿದರು.

ಚಿಂಚೋಳಿ ಮತ್ತು ಕುಂದಗೋಳದಲ್ಲಿ ವ್ಯಾಪಕ ಭದ್ರತೆ ಕೈಗೊಳ್ಳಲಾಗಿದೆ. ಚುನಾವಣಾ ಆಯೋಗ ಎಲ್ಲೆಡೆ ಹದ್ದಿನ ಕಣ್ಣಿರಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next