ಹೊಸದಿಲ್ಲಿ: ಚೀನದ ವಿದೇಶಾಂಗ ಸಚಿವ ವಾಂಗ್ ಇ ಅವರು ಗುರುವಾರ ತಡರಾತ್ರಿ ಹೊಸದಿಲ್ಲಿಗೆ ಆಗಮಿಸಿದ್ದಾರೆ.
2020ರ ಜೂನ್‌ನಲ್ಲಿ ಪೂರ್ವ ಲಡಾಖ್‌ನ ಗಾಲ್ವನ್‌ನಲ್ಲಿ ಎರಡೂ ದೇಶಗಳ ನಡುವೆ ಹೋರಾಟ ನಡೆದ ಬಳಿಕ ಇದೇ ಮೊದಲ ಬಾರಿಗೆ ಚೀನ ಸರಕಾರದ ಉನ್ನತ ಮಟ್ಟದ ಸಚಿವರು ಭಾರತ ಪ್ರವಾಸ ಕೈಗೊಂಡಿದ್ದಾರೆ.
ಶುಕ್ರವಾರ ಅವರು ವಿದೇಶಾಂಗ ಸಚಿವ ಎಸ್.ಜೈಶಂಕರ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಪ್ರಮುಖರನ್ನು ಭೇಟಿ ಯಾಗಲಿದ್ದಾರೆ. ಈ ಭೇಟಿ ಎರಡೂ ದೇಶಗಳ ನಡುವಿನ ಬಿಗುವಿನ ವಾತಾವರಣ ತಣಿಸುವ ಸಾಧ್ಯತೆಗಳ ಬಗ್ಗೆ ವಿಶ್ಲೇಷಣೆಗಳು ನಡೆದಿವೆ.
ವಾಂಗ್ ಹೇಳಿಕೆಗೆ ತಿರಸ್ಕಾರ :
ಇಸ್ಲಾಮಾಬಾದ್‌ನಲ್ಲಿ ನಡೆದಿದ್ದ ಇಸ್ಲಾಮಿಕ್ ರಾಷ್ಟ್ರಗಳ ಒಕ್ಕೂಟದ ಸಭೆಯಲ್ಲಿ ಕಾಶ್ಮೀರ ವಿಚಾರದ ಬಗ್ಗೆ ಚೀನ ಸಚಿವ ವಾಂಗ್ ಇ ವ್ಯಕ್ತಪಡಿಸಿದ ಅಭಿಪ್ರಾಯವನ್ನು ಕೇಂದ್ರ ಸರಕಾರ ತಿರಸ್ಕರಿಸಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಸಂಬಂಧಿಸಿದಂತೆ ಇಸ್ಲಾಮಿಕ್ ರಾಷ್ಟ್ರಗಳು ಹೊಂದಿರುವ ಅಭಿಪ್ರಾಯವನ್ನೇ ಚೀನ ಹೊಂದಿದೆ ಎಂದು ವಾಂಗ್ ಇ ಪ್ರತಿಕ್ರಿಯೆ ನೀಡಿದ್ದರು. ಕಾಶ್ಮೀರದ ಬಗೆಗಿನ ಹೇಳಿಕೆ ಸ್ವೀಕಾರಾರ್ಹವಲ್ಲ’ ಎಂದು ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿದೆ. ಆದರೆ ಈ ಹೇಳಿಕೆ ಬಗ್ಗೆ ಚೀನ ಸರಕಾರ ಮೌನವಾಗಿದೆ.