Advertisement
ಗಾಲ್ವಾನ್ ಕಣಿವೆ ಪ್ರದೇಶದಲ್ಲಿನ ಸಂಘರ್ಷ ಸ್ಥಿತಿಯನ್ನು ತಿಳಿಗೊಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂದು ಸೇನಾ ಪ್ರಕಟಣೆಯಲ್ಲಿ ತಿಳಿಸಿದೆ. ಅಲ್ಲದೇ ನಿನ್ನೆ ನಡೆದ ಸಂಘರ್ಷದಲ್ಲಿ ಉಭಯ ದೇಶಗಳ ಸೈನಿಕರು ಸಾವನ್ನಪ್ಪಿರುವುದಾಗಿ ತಿಳಿಸಿದೆ. ಒಬ್ಬರು ಅಧಿಕಾರಿ ಹಾಗೂ ಇಬ್ಬರು ಸೈನಿಕರು ಸೇರಿ ಮೂವರು ಭಾರತೀಯರು ಹುತಾತ್ಮರಾಗಿದ್ದು, ಪ್ರತಿದಾಳಿಯಲ್ಲಿ ಚೀನಾ ಸೈನಿಕರು ಕೂಡಾ ಸಾವನ್ನಪ್ಪಿರುವುದಾಗಿ ತಿಳಿಸಿದೆ. ಉದ್ವಿಗ್ನ ಸ್ಥಿತಿ ಬಗೆಹರಿಸಲು ಪ್ರಸ್ತುತ ಸೇನೆಯ ಹಿರಿಯ ಅಧಿಕಾರಿಗಳು ಚರ್ಚೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
Related Articles
Advertisement
ಚೀನಾ ಆಕ್ರೋಶ ವ್ಯಕ್ತಪಡಿಸಿ ಪ್ರಕಟಣೆ ನೀಡಿದ್ದು, ಭಾರತೀಯ ಸೈನಿಕರು ಗಡಿ ದಾಟಿ ಬಂದು ಚೀನಾ ಸೈನಿಕರ ಮೇಲೆ ದಾಳಿ ನಡೆಸಿದ್ದಾರೆ ಎಂದು ಎಎಫ್ ಪಿ ವರದಿ ಮಾಡಿದೆ. ಭಾರತ ದಿಢೀರ್ ಆಗಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಾರದು ಅಥವಾ ಪ್ರಚೋದನೆಯಿಂದ ಸಮಸ್ಯೆ ಮತ್ತಷ್ಟು ಬಿಗಡಾಯಿಸಲಿದೆ ಎಂದು ಎಚ್ಚರಿಸಿದೆ.